ಸಾರಾಂಶ
ವಿಜಯಪುರ: ರಾಜ್ಯ ಪಿಸಿ, ಪಿ.ಎನ್.ಡಿ.ಟಿ ಕೋಶದ ಉಪನಿರ್ದೇಶಕ ಡಾ.ವಿವೇಕ್ ದೊರೈ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ ಜಿಲ್ಲೆಯ ವಿವಿಧ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದರು.
ವಿಜಯಪುರ: ರಾಜ್ಯ ಪಿಸಿ, ಪಿ.ಎನ್.ಡಿ.ಟಿ ಕೋಶದ ಉಪನಿರ್ದೇಶಕ ಡಾ.ವಿವೇಕ್ ದೊರೈ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ ಜಿಲ್ಲೆಯ ವಿವಿಧ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದರು.ನೂನ್ಯತೆ ಕಂಡು ಬಂದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ನೋಟಿಸ್ ನೀಡಿ ಭ್ರೂಣ ಲಿಂಗ ಪತ್ತೆ ಕಾಯ್ದೆ ಯಡಿಯಲ್ಲಿ ಯಾರಾದರು ಪರೀಕ್ಷೆ ಮತ್ತು ಪತ್ತೆ ಕಂಡುಬಂದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರ್‌ಗಳ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಈ ಕಾಯ್ದೆ ಕುರಿತು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಡಾ.ರಾಜೇಶ್ವರಿ ಗೋಲಗೆರಿ, ಡಾ.ಅನಿಲ್ ಥಾಮಸ್, ಡಾ.ಪರಶುರಾಮ್ ಹಿಟ್ನಳ್ಳಿ, ಶ್ರೇಯಸ್ ಪೋಳ್ ಹಾಗೂ ಪಿಸಿ, ಪಿ.ಎನ್.ಡಿ.ಟಿ ತಂಡದ ಸದಸ್ಯರು ಉಪಸ್ಥಿತರಿದ್ದರು.