ಮಾವುತ, ಕಾವಾಡಿಗಳ ಕುಟುಂಬದ ಮಹಿಳೆಯರಿಗ ಬಾಗಿನ

| Published : Oct 02 2024, 01:02 AM IST

ಸಾರಾಂಶ

ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ

ಕನ್ನಡಪ್ರಭ ವಾರ್ತೆ ಮೈಸೂರು

ದಸರಾ ಗಜಪಡೆಗಳೊಂದಿಗೆ ಆಗಮಿಸಿರುವ ಮಾವುತ ಮತ್ತು ಕಾವಡಿಗಳ ಕುಟುಂಬದ ಮಹಿಳೆಯರಿಗೆ ಅರಮನೆ ಆವರಣದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಎಂ. ಶಾಂತಾ ರಾಮಕೃಷ್ಣ ಅಭಿಮಾನಿ ಬಳಗದಿಂದ ಅರಿಶಿನ ಕುಂಕುಮ, ವಿಳ್ಯದೆಲೆ, ಬಾಳೆಹಣ್ಣು, ಹಾಗೂ ತೆಂಗಿನಕಾಯಿ, ಸೀರೆಯೊಂದಿಗೆ ಬಾಗಿನ ನೀಡಲಾಯಿತು.

ಈ ವೇಳೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಬಿ. ಪುಷ್ಪಾ ಅಮರನಾಥ್ ಮಾತನಾಡಿ, ಎಲ್ಲರನ್ನೂ ಒಗ್ಗೂಡಿಸಿ ಸೌಹಾರ್ದ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ದಸರಾ ಮಹೋತ್ಸವ ಸಹಕಾರಿ ಆಗಲಿದೆ. ಆ ಮೂಲಕ ಸಂಸ್ಕೃತಿ ಹಾಗೂ ಬದುಕಿನ ಸಂದೇಶವನ್ನು ಎಲ್ಲರಿಗೂ ತಲು ಪಿಸುವುದೇ ಈ ಉತ್ಸವದ ಉದ್ದೇಶವಾಗಿದೆ ಎಂದರು. ಡಿಸಿಎಫ್ ಡಾ.ಐ.ಬಿ. ಪ್ರಭುಗೌಡ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಸಮಾಜ ಸೇವಕರಾದ ಎಂ. ಶಾಂತಾ ರಾಮಕೃಷ್ಣ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ನಾಗಮಣಿ, ದರ್ಶನ್, ರೇಣುಕಾ, ಸವಿತಾ ಘಾಟ್ಕೆ, ಸಂತೋಷ್, ಶಾರದಾ ಮೊದಲಾದವರು ಇದ್ದರು.