ಸಾರಾಂಶ
ಈ ವರ್ಷ ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರಕದ ಕಾರಣ ಸಾಲದ ಹೊರೆ ಹೆಚ್ಚಾದ ಪರಿಣಾಮ ಮನನೊಂದು ಈತ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಲೂರು:
ಸಾಲ ಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಹುಣಸವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಬಂಡಿ ತಿಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.ಗ್ರಾಮದ ರಾಮೇಗೌಡರ ಮಗ ಹೇಮಂತ್ (54) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ ಬ್ಯಾಂಕ್ ಹಾಗೂ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದನೆಂದು ತಿಳಿದು ಬಂದಿದೆ. ಈ ವರ್ಷ ಬೆಳೆದ ಬೆಳೆಗೆ ಸೂಕ್ತ ಬೆಲೆ ದೊರಕದ ಕಾರಣ ಸಾಲದ ಹೊರೆ ಹೆಚ್ಚಾದ ಪರಿಣಾಮ ಮನನೊಂದು ಈತ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಕಳೆ ನಾಶಕ ಸೇವಿಸಿ ಒದ್ದಾಡುತ್ತಿದ್ದ ಈತನನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮನೆಯವರು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.