ಸಾರಾಂಶ
ಕನ್ನಡಪ್ರಭ ವಾರ್ತೆ ಕನಕಪುರ
ಸಾಲಬಾಧೆ ತಾಳಲಾರದೆ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೆಟ್ಟಿಕೆರೆ ದೊಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಉಯ್ಯಂಬಹಳ್ಳಿ ಹೋಬಳಿಯ ಶೆಟ್ಟಿಕೆರೆದೊಡ್ಡಿ ಗ್ರಾಮದ ನಂದೀಶ್ (35) ಸಾಲಬಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.ನಂದೀಶ್ ಖಾಸಗಿ ಬ್ಯಾಂಕ್ ಮತ್ತು ಪೈನಾನ್ಸ್ ಗಳಿಂದ ಪಡೆದಿದ್ದ ಸಾಲ ತೀರಿಸಲು ಸಾಧ್ಯವಾಗದೆ ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದು, ಮೃತ ರೈತ ನಂದೀಶ್ ಕೃಷಿಗೆ ಖಾಸಗಿ ಪೈನಾನ್ಸ್ ಮತ್ತು ಕೆಲವರಿಂದ ಕೈ ಸಾಲ ಸೇರಿ 10 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದು, ಕೃಷಿಯಲ್ಲಿ ನಷ್ಟವಾಗಿ ಸಾಲ ತೀರಸಲಾಗದೆ ಮಾಡಿದ ಸಾಲಕ್ಕೆ ಬಡ್ಡಿ ಕಟ್ಟಲಾಗದೆ ಮನನೊಂದು ಸೋಮವಾರ ಬೆಳಗ್ಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಉಯ್ಯಂಬಳ್ಳಿ ಹೋಬಳಿಯ ಶೆಟ್ಟಿಕೆರೆ ದೊಡ್ಡಿ ಗ್ರಾಮದಲ್ಲಿ ಮೃತ ನಂದೀಶ್ ತನ್ನ ತಾಯಿ ಶಿವಮ್ಮ ಅವರೊಂದಿಗೆ ವಾಸವಾಗಿದ್ದರು, ಈಗ ಸಾಲಬಾಧೆ ತಾಳಲಾರದೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಒಬ್ಬಂಟಿಯಾಗಿ ಇಳಿವಯಸ್ಸಿನಲ್ಲಿರುವ ಶಿವಮ್ಮನಿಗೆ ದಿಕ್ಕು ತೋಚದಂತಾಗಿದೆ, ಮಗ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಿ ಇಳಿ ವಯಸ್ಸಿನಲ್ಲಿರುವ ವೃದ್ಧೆ ಶಿವಮ್ಮನವರ ನೆರವಿಗೆ ರಾಜ್ಯ ಸರ್ಕಾರ ಬರಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಮೃತನ ತಾಯಿ ಶಿವಮ್ಮ ನೀಡಿದ ದೂರಿನ ಮೇರೆಗೆ ಕೋಡಿಹಳ್ಳಿ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಶವವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.