ನಾಳೆ ಅನ್ವರ್ ಭಾಷಾಗೆ ಅಭಿನಂದನಾ ಸಮಾರಂಭ
KannadaprabhaNewsNetwork | Published : Oct 16 2023, 01:45 AM IST
ನಾಳೆ ಅನ್ವರ್ ಭಾಷಾಗೆ ಅಭಿನಂದನಾ ಸಮಾರಂಭ
ಸಾರಾಂಶ
ಜಿಲ್ಲಾ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾಹಿತಿ ಸೈಫುದ್ದೀನ್ ನಂತರ ದುರ್ಗಕ್ಕೆ ಒಲಿದು ಬಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ
ಜಿಲ್ಲಾ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾಹಿತಿ ಸೈಫುದ್ದೀನ್ ನಂತರ ದುರ್ಗಕ್ಕೆ ಒಲಿದು ಬಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಕರ್ನಾಟಕ ರಾಜ್ಯ ವಕ್ಛ್ ಮಂಡಳಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಆನ್ವರ್ ಭಾಷಾ ಅವರಿಗೆ ಅಭಿನಂದನಾ ಸಮಾರಂಭವನ್ನು 17ರಂದು ಮಂಗಳವಾರ ಚಿತ್ರದುರ್ಗದಲ್ಲಿ ಭರ್ಜರಿಯಾಗಿ ಆಯೋಜಿಸಲಾಗಿದೆ. ಕಳೆದ 40 ವರ್ಷಗಳ ನಂತರ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ ಚಿತ್ರದುರ್ಗಕ್ಕೆ ಒಲಿದು ಬಂದಿದೆ. ಈ ಮೊದಲು ಸೈಫುದ್ದೀನ್ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಭಿನಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್, (ಎಂಸಿಓಬಾಬು) ಮಂಡಳಿಯ ರಾಜ್ಯಾಧ್ಯಕ್ಷ ಸ್ಥಾನ ಚಿತ್ರದುರ್ಗಕ್ಕೆ ಒಲಿದು ಬಂದಿರುವುದು ಕೋಟೆ ನಾಡಿನ ಜನರಿಗೆ ಸಂತಸ ತಂದಿದೆ. ಈ ಕಾರಣಕ್ಕಾಗಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಿ ಸಂಭ್ರಮದ ಸ್ಪರ್ಶ ನೀಡಲಾಗುವುದು. ಅಲ್ಪಸಂಖ್ಯಾತ ಸಮುದಾಯದ ಜನ ತಮ್ಮ ಮನೆಯ ಪ್ರಾತಿನಿಧ್ಯವೆಂಬಂತೆ ಅಭಿನಂದನೆಯಲ್ಲಿ ಪಾಲ್ಗೊಳ್ಳುವರೆಂದರು. ಚಳ್ಳಕೆರೆ ರಸ್ತೆಯಲ್ಲಿರುವ ಎಸ್.ಜಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಮಧ್ಯಾಹಹ್ನ 12ಕ್ಕೆ ಅಭಿನಂದನಾ ಸಮಾರಂಭ ನಡೆಯಲಿದ್ದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಕ್ಛ್ ಸಚಿವದ ಬಿ.ಝಡ್ ಜಮೀರ್ ಆಹಮದ್ ಖಾನ್ ಪಾಲ್ಗೊಳ್ಳುವರು. ಜಮೀರ್ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸುತ್ತಿರುವುದರಿಂದ ನಗರದ ಮದಕರಿನಾಯಕ, ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಕನಕದಾಸ, ಒನಕೆ ಓಬವ್ವ ಪ್ರತಿಮೆಗಳಿಗೆ ಮಾಲಾರ್ಪಣೆಯನ್ನು ಮಾಡಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆಯನ್ನು ಸಲ್ಲಿಸುವರು. ಅದೇ ಸಮಯದಲ್ಲಿ ಕಾಂಗ್ರೆಸ್ ಕಚೇರಿಗೆ ಸೌಹಾರ್ದಯುತವಾದ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ನಗರದ ಆಗಸನಕಲ್ಲು ಬಡಾವಣೆಯಲ್ಲಿ ಬೋರ್ಡಿನ ಜಾಗದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ವಕ್ಛ್ ಭವನಕ್ಕೆ ಶಂಕು ಸ್ಥಾಪನೆ ನೆರವೇರಿಸುವರು. ವಕ್ಫ್ ಭವನ ನಿರ್ಮಾಣಕ್ಕೆ ಸರ್ಕಾರ ಈಗ 2 ಕೋಟಿ ರು. ಬಿಡುಗಡೆಗೆ ಆದೇಶ ನೀಡಿದ್ದು ಇದರಲ್ಲಿ ಒಂದು ಕೋಟಿ ಬಿಡುಗಡೆ ಮಾಡಿದೆ ಎಂದು ಎಂಸಿಓ ಬಾಬು ತಿಳಿಸಿದರು. ಮಧ್ಯಾಹ್ನ 12ಕ್ಕೆ ನಡೆಯುವ ಆಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಕೆ.ಸಿ.ವಿರೇಂದ್ರ ವಹಿಸಲಿದ್ದಾರೆ. ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಮುಖ್ಯ ಸಚೇತಕ ಸಲೀಮ್ ಆಹಮದ್, ಶಾಸಕರಾದ ಎನ್.ವೈ ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್,ಚಂದ್ರಪ್ಪ, ರಾಷ್ಟ್ರೀಯ ಸಂಯೋಜಕ ಎಚ್.ಎಂ.ಶಕೀಲ್ ನವಾಜ್, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಕೆಪಿಸಿಸಿ ಸದಸ್ಯ ವಿಜಯಕುಮಾರ್ ಹಾಗೂ ದಾವಣಗೆರೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮಹಮ್ಮದ್ ಸಿರಾಜ್ ಭಾಗವಹಿಸಲಿದ್ದಾರೆ ಎಂದರು. ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಸೈಫುಲ್, ಸದಸ್ಯರಾದ ದಾದಾಪೀರ್, ಹನೀಸ್ ನವಾಜ್ ಖುದ್ದೂಸ್, ರಹಮತುಲ್ಲಾ, ಪ್ರಕಾಶ್ ರಾಮ ನಾಯ್ಕ್ ಸುದ್ದಿಗೋಷ್ಠಿಯಲ್ಲಿದ್ದರು.