ಗುತ್ತಲ ಬಳಿ ಬೋನಿಗೆ ಬಿದ್ದ ಹೆಣ್ಣು ಚಿರತೆ ಮರಿ

| Published : Jul 07 2025, 11:48 PM IST

ಸಾರಾಂಶ

ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ದಾಂಡೇಲಿ ಅರಣ್ಯ ಪ್ರದೇಶಕ್ಕೆ ಬಿಡಲು ಒಯ್ದಿದ್ದಾರೆ. ಕೂರಗುಂದ ರಸ್ತೆಯ ಮೀಸಲು ಅರಣ್ಯ ಪ್ರದೇಶದ ಬಳಿ ಚಿರತೆ ಓಡಾಡಿದ ಬಗ್ಗೆ ಹೆಜ್ಜೆ ಗುರುತುಗಳು ಕಂಡುಬಂದಿದ್ದವು.

ಗುತ್ತಲ: ಕಳೆದ ಕೆಲವು ದಿನಗಳಿಂದ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆ ಮರಿಯೊಂದು ಸೋಮವಾರ ಬೆಳಗಿನ ಜಾವ ಬೋನಿಗೆ ಬಿದ್ದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ದಾಂಡೇಲಿ ಅರಣ್ಯ ಪ್ರದೇಶಕ್ಕೆ ಬಿಡಲು ಒಯ್ದಿದ್ದಾರೆ. ಕೂರಗುಂದ ರಸ್ತೆಯ ಮೀಸಲು ಅರಣ್ಯ ಪ್ರದೇಶದ ಬಳಿ ಚಿರತೆ ಓಡಾಡಿದ ಬಗ್ಗೆ ಹೆಜ್ಜೆ ಗುರುತುಗಳು ಕಂಡುಬಂದಿದ್ದವು. ಈ ಹಿನ್ನೆಲೆ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟಿದ್ದರು. ಹೆಣ್ಣು ಚಿರತೆ ಮರಿ(ಸುಮಾರು 2 ವರ್ಷ) ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್‌ಅಜೀಜ್ ಎ. ಶೇಖ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಾಥ ಮನೋಹರ ಕಡೋಲ್ಕರ್, ವಲಯ ಅರಣ್ಯ ಅಧಿಕಾರಿ ಶ್ರೀನಿವಾಸ ಆರ್, ಉಪವಲಯ ಅರಣ್ಯ ಅಧಿಕಾರಿ ಎಫ್.ಎಚ್. ಮಾಗಡಿ, ಗಸ್ತು ಅರಣ್ಯ ಪಾಲಕ ಬಸವರಾಜ ಕುಲಕರ್ಣಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.ನರೇಗಲ್ಲಿನಲ್ಲಿ ಎಲ್‌ಕೆಜಿ ವಿಭಾಗಕ್ಕೆ ಚಾಲನೆ

ಹಾನಗಲ್ಲ: ತಾಲೂಕಿನ ನರೇಗಲ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ವಿಭಾಗಕ್ಕೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ, ಸಂಪನ್ಮೂಲ ವ್ಯಕ್ತಿ ಖ್ವಾಜಾ ಮೋಹಿದ್ದಿನ್, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಪೋಷಕರು ಪಾಲ್ಗೊಂಡಿದ್ದರು. ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಅಕ್ಷರ ಅಭ್ಯಾಸದೊಂದಿಗೆ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಎಸ್‌ಡಿಎಂಸಿಯವರು ದಾಖಲಾತಿ ಆಂದೋಲನದ ಸಮಯದಲ್ಲಿ ಘೋಷಿಸಿದಂತೆ ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಒಂದು ಸಾವಿರ ರು. ಠೇವಣಿಯನ್ನು ಸಾಂಕೇತಿಕವಾಗಿ ವಿತರಿಸಿದರು.

ಎಲ್‌ಕೆಜಿಗೆ ದಾಖಲಾದ 43 ಮಕ್ಕಳಿಗೆ ಪಠ್ಯಪುಸ್ತಕ, ಸ್ಕೂಲ್ ಬ್ಯಾಗ್, ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಸಮೇತ ಅಭ್ಯಾಸದ ಸಾಮಗ್ರಿಗಳನ್ನು, ಹಿರಿಯ ಶಿಕ್ಷಕಿ ಕೆ.ಆರ್. ರೇಣುಕಮ್ಮ ಅವರು ತಮ್ಮ ಜನ್ಮದಿನದ ಪ್ರಯುಕ್ತ ನೋಟ್‌ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು. ಪ್ರಧಾನ ಗುರುಗಳಾದ ಮಲ್ಲಯ್ಯ ಹಿರೇಮಠ ತಿಳಿಸಿದರು.