ಬೋನಿಗೆ ಬಿದ್ದ ಹೆಣ್ಣು ಚಿರತೆ

| Published : Oct 31 2025, 01:45 AM IST

ಸಾರಾಂಶ

ಮಾಗಡಿ: ತಾಲೂಕಿನ ಚಕ್ರಬಾವಿ ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ನಾಲ್ಕು ಚಿರತೆಗಳ ಪೈಕಿ ಒಂದು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಮಾಗಡಿ: ತಾಲೂಕಿನ ಚಕ್ರಬಾವಿ ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡ ನಾಲ್ಕು ಚಿರತೆಗಳ ಪೈಕಿ ಒಂದು ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ತಾಲೂಕಿನ ಚಕ್ರಬಾವಿಯ ನರಸಿಂಹಮೂರ್ತಿ ಅವರ ತೋಟದಲ್ಲಿ ಮಂಗಳವಾರ ರಾತ್ರಿ ಮೂರು ಮರಿ ಚಿರತೆ ಹಾಗೂ ತಾಯಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ನರಸಿಂಹಮೂರ್ತಿ ತೋಟದಲ್ಲಿ ಎರಡು ಬೋನ್ ಗಳನ್ನು ಇರಿಸಲಾಗಿತ್ತು. ಬುಧವಾರ ರಾತ್ರಿ ಒಂದು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದು ಕೂಗುತ್ತಿದ್ದದ್ದನ್ನು ಗಮನಿಸಿದ ಗ್ರಾಮಸ್ಥರು ಸ್ಥಳಕ್ಕೆ ಬಂದು ನೋಡಿದಾಗ ಚಿರತೆ ಸೆರೆಯಾಗಿತ್ತು. ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿ ಚಿರತೆಯನ್ನು ಮಾಗಡಿ ವಲಯ ಅರಣ್ಯ ಅಧಿಕಾರಿ ಕಚೇರಿಗೆ ಸ್ಥಳಾಂತರ ಮಾಡಲಾಯಿತು.

ಅರಣ್ಯ ಇಲಾಖೆ ಇನ್ನಷ್ಟು ಬೋನ್ ಗಳನ್ನೆಟ್ಟು ಉಳಿದ ಚಿರತೆಗಳನ್ನು ಸೆರೆ ಹಿಡಿದು ಗ್ರಾಮಸ್ಥರ ಆತಂಕ ದೂರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ದೂರದ ಕಾಡಿಗೆ ಬಿಡಲು ಒತ್ತಾಯ: ಪದೇಪದೆ ಗ್ರಾಮಗಳಿಗೆ ದಾಳಿ ಮಾಡುತ್ತಿರುವ ಚಿರತೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿವೆ. ಆದ್ದರಿಂದ ಈಗ ಸೆರೆಯಾಗಿರುವ ಚಿರತೆಯನ್ನು ದೂರದ ಕಾಡಿಗೆ ಬಿಡಬೇಕು. ಜಿಪಿಎಸ್ ಚಿಪ್‌ಗಳನ್ನು ಅಳವಡಿಸಿ ಚಲನವಲನಗಳ ಬಗ್ಗೆ ನಿಗಾ ವಹಿಸಬೇಕು ಎಂದು ಮರಳುದೇವನಪುರ ಚಕ್ರಬಾವಿ ಕೋರಮಂಗಲ ಗ್ರಾಮಸ್ಥರು ಮಾಗಡಿ ವಲಯ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.