ಸಾರಾಂಶ
ಉಡುಪಿ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಉಡುಪಿನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕನ್ನಡ ಭಾಷೆ ಸುಂದರವಾದ ಭಾಷೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದರೆ ದೈನಂದಿನ ಜೀವನದಲ್ಲಿ ಕನ್ನಡ ಶಬ್ದಗಳ ಬಳಕೆ ಕ್ಷೀಣಿಸುತ್ತಿದೆ ಎಂದು ಕಳವಳ ವ್ಯಕ್ತ ಪಡಿಸಿದರು.ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಂಟಿ ಅಂಕಲ್ ಸಂಸ್ಕೃತಿಯ ಬದಲಾಗಿ ಚಿಕ್ಕಮ್ಮ, ಚಿಕ್ಕಪ್ಪ, ಮಾವ, ಅತ್ತೆ ಸಂಸ್ಕೃತಿ ಬರಬೇಕು. ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳಸಬೇಕು ಎಂದು ಕರೆ ನೀಡಿದರು.ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೌರಿ ಪ್ರಭು, ಕನ್ನಡ ರಾಜ್ಯೋತ್ಸವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊದಲಿಗೆ ಅನನ್ಯ ಸಂಗಡಿಗರು ಪ್ರಾರ್ಥಿಸಿದರು. ಕಾಲೇಜಿನ ಸಂಯೋಜಕ ಮಾಧವ ಪೂಜಾರಿ ಸ್ವಾಗತಿಸಿದರು. ಚರಣ್ ವಂದಿಸಿದರು. ಸಾಯಿ ತನ್ಮಯಿ ಕಾರ್ಯಕ್ರಮ ನಿರೂಪಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))