ಸಾರಾಂಶ
ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಪಕ್ಷ ಉಳಿಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದನ್ನು ಕೇಳಿದ್ದೇವೆ. ಅದಕ್ಕೆ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಈ ಋಣವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.
ಮದ್ದೂರು: ಲೋಕಸಭಾ ಚುನಾವಣೆ ನಂತರ ಜೆಡಿಎಸ್ ಪಕ್ಷ ಉಳಿಯಲ್ಲ ಎನ್ನುವವರಿಗೆ ಜಿಲ್ಲೆಯ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಕೇಂದ್ರ ಸಚಿವ, ಎಚ್ .ಡಿ.ಕುಮಾರಸ್ವಾಮಿ ಅವರೊಂದಿಗೆ ಬೃಹತ್ ರೋಡ್ ಶೋ ಮೂಲಕ ಆಗಮಿಸಿದಾಗ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅತಿ ಹೆಚ್ಚು ದಾಖಲೆ ಮತಗಳಿಂದ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ್ದೀರಿ. ಇದರಲ್ಲಿ ಮದ್ದೂರು ತಾಲೂಕಿನಲ್ಲೇ 56 ಸಾವಿರಕ್ಕೂ ಹೆಚ್ಚು ಮತಗಳನ್ನು ಕೊಟ್ಟಿದ್ದೀರಿ. ನಿಮ್ಮ ಆಶೀರ್ವಾದದಿಂದ ನಮಗೆ ಶಕ್ತಿ ಬಂದಿದೆ ಎಂದರು.ಲೋಕಸಭೆ ಚುನಾವಣೆ ನಂತರ ಜೆಡಿಎಸ್ ಪಕ್ಷ ಉಳಿಯುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದನ್ನು ಕೇಳಿದ್ದೇವೆ. ಅದಕ್ಕೆ ಜಿಲ್ಲೆಯ ಜನರೇ ತಕ್ಕ ಉತ್ತರ ನೀಡುವ ಮೂಲಕ ನಮಗೆ ಶಕ್ತಿ ತುಂಬಿದ್ದಾರೆ. ಈ ಋಣವನ್ನು ನಾವು ಎಂದಿಗೂ ಮರೆಯುವುದಿಲ್ಲ ಎಂದು ತಿಳಿಸಿದರು.
ಈ ಹಿಂದೆ ಲೋಕಸಭಾ ಚುನಾವಣೆಯಲ್ಲೂ ನನಗೆ 5 ಲಕ್ಷಕ್ಕಿಂತಲೂ ಹೆಚ್ಚು ಮತಗಳನ್ನು ನೀಡಿ ಬೆಂಬಲಿಸಿದ್ದೀರಿ. ನಿಮ್ಮ ನಿರೀಕ್ಷೆ ಮೀರಿ ವಾರಕ್ಕೊಮ್ಮೆ ಜಿಲ್ಲೆಯಲ್ಲಿ ಇಡೀ ದಿನ ಪ್ರವಾಸ ಮಾಡಿ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.