ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬ ಹಾಗೂ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಸೇವೆ ಗೌರವಾರ್ಥವಾಗಿ ಸೆ.17ರಿಂದ ಅ.17ರವರೆಗೆ ಒಂದು ತಿಂಗಳ ಪರ್ಯಂತ ಅವಳಿ ತಾಲೂಕಿನಾದ್ಯಂತ ಸೇವಾ ಸಂಕಲ್ಪ ಅಭಿಯಾನ ನಡೆಸಿದ್ದು, ಇದರ ಸಮಾರೋಪ ಅಂಗವಾಗಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ, ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳ‍ಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

- ಮಾಜಿ ಸಚಿವ ರೇಣುಕಾಚಾರ್ಯ ಅಭಿಮತ । ಆರೋಗ್ಯ ತಪಾಸಣೆ- ರಕ್ತದಾನ ಶಿಬಿರ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬ ಹಾಗೂ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಸೇವೆ ಗೌರವಾರ್ಥವಾಗಿ ಸೆ.17ರಿಂದ ಅ.17ರವರೆಗೆ ಒಂದು ತಿಂಗಳ ಪರ್ಯಂತ ಅವಳಿ ತಾಲೂಕಿನಾದ್ಯಂತ ಸೇವಾ ಸಂಕಲ್ಪ ಅಭಿಯಾನ ನಡೆಸಿದ್ದು, ಇದರ ಸಮಾರೋಪ ಅಂಗವಾಗಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ, ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳ‍ಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಸೇವಾ ಸಂಕಲ್ಪ ಆಭಿಯಾನದ ಮುಕ್ತಾಯ ದಿನವಾದ ಅ.17ರ ಶನಿವಾರ ಪಟ್ಟಣದ ಶ್ರೀ ಹಳದಮ್ಮ ದೇವಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರವನ್ನು ಸಸಿಗೆ ನೀರೇರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತೆ ಮಾಡಿರುವ ಹಾಗೂ ಸರ್ಚಿಕಲ್ ಸ್ಟ್ರೈಕ್, ಸಿಂದೂರ ಕಾರ್ಯಾಚರಣೆಗಳ ಮೂಲಕ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಉಗ್ರರಿಗೆ ತಕ್ಕಪಾಠ ಕಲಿಸಿದ್ದಾರೆ. ಅವರು 25 ವರ್ಷಗಳ ಸಾರ್ವಜನಿಕ ಸೇವೆ ಪೂರ್ಣಗೊಳಿಸುತ್ತಿದ್ದಾರೆ. ಈ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನವನ್ನು ನಡೆಸಿ ಶನಿವಾರ ಸಾರ್ವಜನಿಕರಿಗೆ ತಜ್ಞ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ರಕ್ತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಕೂಡ ಆಯೋಜಿಸಿದ್ದೇವೆ. ಯುವಜನರಲ್ಲಿ ರಕ್ತದಾನ ಬಗ್ಗೆ ಇರುವ ಹಿಂಜರಿಕೆ, ಅಂಜಿಕೆ ಮನೋಭಾವನೆ ಹೋಗಲಾಡಿಸಿ, ರಕ್ತದಾನ ಮಾಡುವುದರಿಂದ ಮನುಷ್ಯರ ಅರೋಗ್ಯಕ್ಕೆ ತುಂಬಾ ಸಹಕಾರಿಯಾಗುವ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಶಿಬಿರದಲ್ಲಿ ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕ್ಲೌಡ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡದವರು ಶಿಬಿರದಲ್ಲಿ ಭಾಗವಹಿಸಿ ಒಂದು ಸಾವಿರಕ್ಕೂ ಅಧಿಕ ಜನರಿಗೆ ಆರೋಗ್ಯ ಸೇವೆಯನ್ನು ನೀಡಿದರು.

ಬಿಜಿಪಿಯ ಮುಖಂಡರು ಸೇರಿದಂತೆ ಸುಮಾರು 106 ಜನ ರಕ್ತದಾನ ಮಾಡಿದರು. ರಕ್ತದಾನ ಮಾಡಿದವರಿಗೆ ಸುಬ್ಬಯ್ಯ ಅರೋಗ್ಯ ಕಾರ್ಡ್ ವಿತರಿಸಲಾಯಿತು. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ, ಮ್ಯಾಕ್ಸ್ ಸೂಪರ್ ಸ್ಲೆಷ್ಟಾಲಿಟಿ ಆಸ್ಪತ್ರೆ, ಕ್ಲೌಡ್‌ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗಳಿಂದ ತಜ್ಞ ವೈದ್ಯರ ತಂಡ ಹಾಗೂ ಸಿಬ್ಬಂದಿ ಶಿಬಿರದಲ್ಲಿ ಆರೋಗ್ಯ ಸೇವೆ ನೀಡಿದರು.

ಮುಖಂಡ ಎಂ.ಆರ್. ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷ ಅರಕರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಎಸ್.ಎಸ್. ಬೀರಪ್ಪ, ನಗರ ಘಟಕದ ಅಧ್ಯಕ್ಷ ನವೀನ್ ಇಂಚರ, ಮಾರುತಿ ನಾಯ್ಕ, ನೆಲಹೊನ್ನೆ ಮಂಜುನಾಥ, ರೈತ ಮೋರ್ಚಾದ ರಮೇಶ್ ಗೌಡ, ಬಾಬು ಹೋಬಳದಾರ್ ಇತರರು ಇದ್ದರು.

- - -

(ಕೋಟ್‌)

ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿಬಿರ ಏರ್ಪಡಿಸಲಾಗಿದೆ. ಆರೋಗ್ಯ ತಪಾಸಣೆ ಮೂಲಕ ಜನರು ತಮ್ಮ ಆರೋಗ್ಯದ ಸ್ಥಿತಿಗತಿ ತಿಳಿದುಕೊಳ್ಳಲು ಹಾಗೂ ಅಗತ್ಯ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆ ಪಡೆಯುವಂತಾಗಲು ಅವಕಾಶ ಕಲ್ಪಿಸಲಾಗಿದೆ.

- ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ.

- - -

-17ಎಚ್.ಎಲ್.ಐ1:

ಮಾಜಿ ಸಚಿವ ರೇಣುಕಾಚಾರ್ಯ ಸಸಿಗೆ ನೀರೇರೆಯವ ಮೂಲಕ ಆರೋಗ್ಯ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿದರು.