‘ಪುಷ್ಪ’ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ

| Published : Feb 08 2024, 01:33 AM IST

‘ಪುಷ್ಪ’ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ
Share this Article
  • FB
  • TW
  • Linkdin
  • Email

ಸಾರಾಂಶ

ಆರೋಪಿಗಳು ಬೋಲೆರೊ ಪಿಕಪ್ ಗೂಡ್ಸ್ ವಾಹನದಲ್ಲಿ ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು. ಲಕ್ಷಾಂತರ ರು. ಬೆಲೆ ಬಾಳುವ ರಕ್ತ ಚಂದನವನ್ನು ವಾಹನದಲ್ಲಿ ಸಾಗಿಸುತ್ತಿರುವ ಮಾಹಿತಿ ಆಧಾರದ ಮೇಲೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಅನ್ನು​ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹಿರೇಕಟ್ಟಿಗೇನಹಳ್ಳಿ ಬಳಿ ಸೆರೆಹಿಡಿದಿದ್ದಾರೆ. ಬೋಲೆರೊ ಪಿಕಪ್ ಗೂಡ್ಸ್ ವಾಹನದಲ್ಲಿ ಸೀಮೆ ಹಸುವಿನೊಂದಿಗೆ ಹುಲ್ಲು ಮುಚ್ಚಿ ರಕ್ತ ಚಂದನ ಸಾಗಿಸುತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಎರಡು ಕಿಮೀ ಬೆನ್ನಟ್ಟಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಬೋಲೆರೊ ಪಿಕಪ್ ಗೂಡ್ಸ್ ವಾಹನ, ಸೀಮೆ ಹಸು ಮತ್ತು ಲಕ್ಷಾಂತರ ರು. ಮೌಲ್ಯದ ರಕ್ತಚಂದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಬೋಲೆರೊ ಪಿಕಪ್ ಗೂಡ್ಸ್ ವಾಹನದಲ್ಲಿ ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು. ಲಕ್ಷಾಂತರ ರು. ಬೆಲೆ ಬಾಳುವ ರಕ್ತ ಚಂದನವನ್ನು ವಾಹನದಲ್ಲಿ ಸಾಗಿಸುತ್ತಿರುವ ಮಾಹಿತಿ ಆಧಾರದ ಮೇಲೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನು ಪೊಲೀಸರನ್ನು ನೋಡುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಎರಡು ಕಿಮೀವರೆಗೂ ಹಿಂಬಾಲಿಸಿ ಸಿನಿಮೀಯ ರೀತಿ ಚೇಸ್​ ಮಾಡಿ ಆರೋಪಿಗಳನ್ನು ಹಿಡಿದಿದ್ದಾರೆ. ಇಬ್ಬರು ಕಳ್ಳರನ್ನು ಬಂಧಿಸಲಾಗಿದ್ದು, ಸುಮಾರು 392 ಕೆಜಿ ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದ ಕಳ್ಳರ ಬಂಧನಕ್ಕೆ ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದಾರೆ.