ಬೀದಿ ನಾಯಿಗಳ ದಾಳಿಗೆ ಮನೆ ಮುಂದೆ ಕಟ್ಟಿಹಾಕಿದ್ದ ಮೇಕೆ ಬಲಿ..!

| Published : Jan 16 2025, 12:45 AM IST

ಸಾರಾಂಶ

ಗ್ರಾಮದ ರೈತ ತಮ್ಮಣ್ಣಗೌಡ ಜೀವನ ನಿರ್ವಹಣೆಗಾಗಿ ಮೇಕೆಗಳನ್ನು ಸಾಕುತ್ತಿದ್ದರು‌. ಮನೆ ಮುಂದೆ ಮೇಕೆಗಳನ್ನು ಕಟ್ಟಿ ಹಾಕಿದ್ದಾಗ ಬೀದಿ ನಾಯಿಗಳು ಸ್ಥಳದಲ್ಲಿಯೇ ಮೇಕೆಯೊಂದನ್ನು ಕೊಂದು ಹಾಕಿವೆ. ಇನ್ನೊಂದು ಮೇಕೆಯನ್ನು ತೀವ್ರವಾಗಿ ಗಾಯಗೊಳಿಸಿವೆ. ಸ್ಥಳಕ್ಕೆ ಚೊಟ್ಟನಹಳ್ಳಿ ಪಶುವೈದ್ಯಾಧಿಕಾರಿ ಡಾ.ರವಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಮನೆ ಮುಂದೆ ಕಟ್ಟಿಹಾಕಿದ್ದ ಮೇಕೆಗಳ ಹಿಂಡಿನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಕೆಂಚನದೊಡ್ಡಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಗ್ರಾಮದ ರೈತ ತಮ್ಮಣ್ಣಗೌಡ ಜೀವನ ನಿರ್ವಹಣೆಗಾಗಿ ಮೇಕೆಗಳನ್ನು ಸಾಕುತ್ತಿದ್ದರು‌. ಮನೆ ಮುಂದೆ ಮೇಕೆಗಳನ್ನು ಕಟ್ಟಿ ಹಾಕಿದ್ದಾಗ ಬೀದಿ ನಾಯಿಗಳು ಸ್ಥಳದಲ್ಲಿಯೇ ಮೇಕೆಯೊಂದನ್ನು ಕೊಂದು ಹಾಕಿವೆ. ಇನ್ನೊಂದು ಮೇಕೆಯನ್ನು ತೀವ್ರವಾಗಿ ಗಾಯಗೊಳಿಸಿವೆ. ಸ್ಥಳಕ್ಕೆ ಚೊಟ್ಟನಹಳ್ಳಿ ಪಶುವೈದ್ಯಾಧಿಕಾರಿ ಡಾ.ರವಿ ಭೇಟಿ ನೀಡಿ ಪರಿಶೀಲನೆ ‌ನಡೆಸಿದರು.

ಈ ವೇಳೆ ರೈತ ತಮ್ಮಣ್ಣಗೌಡ ಮಾತನಾಡಿ, ಗ್ರಾಮದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾಯಿಗಳಿದ್ದು, ಹಲವು ಬಾರಿ ಇಂಥ ಘಟನೆ ನಡೆದಿವೆ. ನಮಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ:

ಮದ್ದೂರು ತಾಲೂಕಿನ ಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್‌ 3 ಚಂದಗಾಲು ಎನ್‌ಜೆವೈ ಫೀಡರ್‌ನಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಜ.17ರಂದು ವಿವಿಧೆಡೆ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ,

ಕೊಪ್ಪ ವಿದ್ಯುತ್ ವಿತರಣಾ ಕೇಂದ್ರದ ಎಫ್‌-3 ಚಂದಗಾಲು ಎನ್‌ಜೆವೈ ಫೀಡರ್‌ನ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು : ಜಿ.ಹೊಸಹಳ್ಳಿ, ಹಲ್ಲೇಗೆರೆ, ಚಂದಗಾಲು, ಚಲ್ಲನಾಯಕನಹಳ್ಳಿ, ತಂಗಳಗೆರೆ, ಆನಸೊಸಲು, ಚಿಕ್ಕಬಳ್ಳಿ, ರಾಯಶೆಟ್ಟಿಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೂ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.ಇಂದಿನಿಂದ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಮಂಡ್ಯ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜ.16ರಿಂದ 31 ರವರೆಗೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಿರಿಯ ನಾಗರಿಕರಿಗಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರಗಳನ್ನು (Cataract) ಆಯೋಜಿಸಲಾಗಿದೆ. ಆಸಕ್ತರು ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು. ಶಿಬಿರಗಳು ಜ.16 ಸಾರ್ವಜನಿಕ ಆಸ್ಪತ್ರೆ ಮಳವಳ್ಳಿ, ಜ.9ರಂದು ಸಾರ್ವಜನಿಕ ಆಸ್ಪತ್ರೆ, ಮದ್ದೂರು, ಜ.22 ರಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾತುಂಗೆರೆ, ಮಂಡ್ಯ. ಜ.23ರಂದು ಕೆ.ಆರ್.ಪೇಟೆ ಮತ್ತು ಪಾಂಡವಪುರದ ಸಾರ್ವಜನಿಕ ಆಸ್ಪತ್ರೆ, ಜ.24 ರಂದು ನಾಗಮಂಗಲ ಮತ್ತು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಜ.31 ರಂದು ಮಂಡ್ಯ ಗುತ್ತಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.ಡಾ.ನಾಗಲಕ್ಷ್ಮೀ ಚೌಧರಿ ಇಂದು ಪಟ್ಟಣದಲ್ಲಿ ಪ್ರವಾಸಕೆ.ಆರ್.ಪೇಟೆ: ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜ.16ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಪಟ್ಟಣದ ಶಿಕ್ಷಕರ ಭವನದಲ್ಲಿ (ಗುರುಭವನ) ಭಾಗವಹಿಸಲಿದ್ದಾರೆ. ಬೆಳಗ್ಗೆ 12 ಗಂಟೆಗೆ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ, ಪರಿಶೀಲನೆ, ಮಧ್ಯಾಹ್ನ 1.30ಕ್ಕೆ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ.