ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೇಳಿದರು.
ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿ ಬದಲಾಯಿಸಿವೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿನ ಜನತೆಯಸಂಕಷ್ಟಕ್ಕೆ ಸ್ಪಂದಿಸುತ್ತೇವೆ. ಈಗಾಗಲೇ ನಾವು ಸಮಾಜಸೇವೆಯ ಮೂಲಕ ಕ್ಷೇತ್ರದಲ್ಲಿನ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸವನ್ನು ಮಾಡುತ್ತ ಬಂದಿದ್ದೇವೆ. ಈಬಾರಿ ಸಹೋದರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳ ಅಂತರದಿಂದ ಆಯ್ಕೆಯಾಗಲು ನಿಮ್ಮಲ್ಲರೂ ಮತ ಹಾಕುವ ಮೂಲಕ ಆಶೀರ್ವಾದ ಮಾಡಬೇಕು. ಈ ಮೂಲಕ ಮತ್ತಷ್ಟು ಸಮಾಜ ಸೇವೆ ಸಲ್ಲಿಸಲು ಅನುಕೂಲವಾಗುತ್ತದೆ ಎಂದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ 9 ತಿಂಗಳ ಒಳಗೆ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದೆ. ಪ್ರತಿಯೊಂದು ಕುಟುಂಬಗಳಿಗೆ ನಾಲ್ಕರಿಂದ ಐದು ಸಾವಿರ ಹಣ ಉಳಿತಾಯವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಂದು ಮನೆಯ ಗೃಹಿಣಿಯರು ₹2000 ಪಡೆದುಕೊಳ್ಳುತ್ತಿದ್ದಾರೆ. ವಿದ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯದಲ್ಲಿ 5 ಕೆಜಿ ಅಕ್ಕಿ, 5 ಕೆಜಿ ಗೆ ಹಣವನ್ನು ಪಡೆಯುತ್ತಿದ್ದಾರೆ. ಹಾಗಾಗಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನತೆಗೆ ಮನೆ ಮನೆಗೆ ತಲುಪಿಸಿ, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಉಪಸ್ಥಿತರಿದ್ದರು.ಕೋಟ್...ಚಿಕ್ಕೋಡಿ ಕ್ಷೇತ್ರದಲ್ಲಿನ ಜನತೆಯ ಕಷ್ಟ-ಸುಖ ಆಲಿಸದ ಹಿಂದಿನ ಬಿಜೆಪಿ ಸಂಸದರು ಕ್ಷೇತ್ರದ ಅಭಿವೃದ್ಧಿಗೂ ಆದ್ಯತೆ ನೀಡಿಲ್ಲ. ಈಗ ಮತ್ತೆ ಚುನಾವಣೆಗೆ ನಿಂತಿದ್ದಾರೆ. ಈ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಬಿಜೆಪಿಯವರು ಮೋದಿ ನೋಡಿ ಮತ ನೀಡಿ ಎಂದು ಕೇಳುತ್ತಿದ್ದಾರೆ. ಇಂಥ ವ್ಯಕ್ತಿಯಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೆ?.-ರಾಹುಲ ಜಾರಕಿಹೊಳಿ, ಯುವ ನಾಯಕ.