ಸಂಸ್ಕಾರ ಸಹಿತ ವಿದ್ಯೆಯಿಂದ ಉತ್ತಮ ಭವಿಷ್ಯ: ಎಂ.ಎಸ್.ವಿಶಾಲಾಕ್ಷಮ್ಮ

| Published : Jul 31 2025, 12:45 AM IST

ಸಂಸ್ಕಾರ ಸಹಿತ ವಿದ್ಯೆಯಿಂದ ಉತ್ತಮ ಭವಿಷ್ಯ: ಎಂ.ಎಸ್.ವಿಶಾಲಾಕ್ಷಮ್ಮ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯಿಂದ ವಿದ್ಯೆ ಕಲಿತರೆ ಮುಂದೆ ಒಳ್ಳೆಯ ಭವಿಷ್ಯ ಸಿಗಲಿದೆ ಎಂದು ದಾನಿ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ವಿತರಣೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಮಕ್ಕಳು ಸಂಸ್ಕಾರ ಮತ್ತು ಸಂಸ್ಕೃತಿಯಿಂದ ವಿದ್ಯೆ ಕಲಿತರೆ ಮುಂದೆ ಒಳ್ಳೆಯ ಭವಿಷ್ಯ ಸಿಗಲಿದೆ ಎಂದು ದಾನಿ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.

ಪಟ್ಟಣದ ನಾಗಪ್ಪ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 40 ಶಾಲಾ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಶಾಲೆ ಮಕ್ಕಳಿಗೆ ಟ್ರ್ಯಾಕ್ ಸೂಟ್ ಪಡೆದ ಮಕ್ಕಳ ಮುಖದಲ್ಲಿ ಸಂತೋಷ ಮತ್ತು ನಗು ಕಂಡು ದೇವರನ್ನು ಕಂಡಷ್ಟು ಸಂತೋಷವಾಯಿತು. ಮುಂದಿನ ದಿನಗಳಲ್ಲಿ ಭಗವಂತ ಶಕ್ತಿ ಕೊಟ್ಟರೆ ಇನ್ನೂ ಹೆಚ್ಚಿನ ಸರ್ಕಾರಿ ಶಾಲೆ ಮಕ್ಕಳಿಗೆ ಹೆಚ್ಚಿನ ಸಹಾಯ ಮಾಡಿ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು. ದಾನಿ ಮಹೇಶ್ ಮಾತನಾಡಿ ಮಕ್ಕಳು ಈಗ ಕಷ್ಟಪಟ್ಟು ನಿಷ್ಠೆಯಿಂದ ಓದಿದರೆ ಮುಂದೆ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದರು. ಶಾಲೆ ಮುಖ್ಯೋಪಾಧ್ಯಾಯ ಎಚ್. ಓಂಕಾರಪ್ಪ ಮಾತನಾಡಿ ಸರ್ಕಾರಿ ಶಾಲಾ ಮಕ್ಕಳಿಗೆ ದಾನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು. ಸಿಆರ್ ಪಿ. ಶಿಲ್ಪಾ ಮಾತನಾಡಿ ದಾನ ಮಾಡಲು ವಯಸ್ಸಿನಮಿತಿ ಇಲ್ಲ. ದಾನ ಮಾಡಿ ಮಕ್ಕಳ ಕಲಿಕೆಗೆ ಸಹಕರಿಸಬೇಕು ಎಂದು ಹೇಳಿದರು.ಶಾಲೆ ಎಸ್.ಡಿಎಂಸಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಶಿವಮೂರ್ತಿ, ವೀಣಾ, ಆಶಾ, ರೇಖಾ ಭಾಗವಹಿಸಿದ್ದರು.-28ಕೆಟಿಆರ್.ಕೆ.2ಃ

ತರೀಕೆರೆಯಲ್ಲಿ ನಾಗಪ್ಪ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಟ್ರ್ಯಾಕ್ ಶೂಟ್ ವಿತರಣಾ ಕಾರ್ಯಕ್ರಮದಲ್ಲಿ ದಾನಿ ಎಂ.ಎಸ್.ವಿಶಾಲಾಕ್ಷಮ್ಮ ಮಾತನಾಡಿದರು. ಶಾಲೆ ಎಸ್.ಡಿಎಂಸಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಮತ್ತಿತರರು ಇದ್ದರು.