ಸಾರಾಂಶ
ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆದ ಶ್ರೀ ಶಾರದಾಂಬಾ ಮಹಾರಥೋತ್ಸವದ ಅಂಗವಾಗಿ ಬುಧವಾರ ರಾತ್ರಿ ತುಂಗಾ ನದಿಯಲ್ಲಿ ವಿಜೃಂಭಣೆಯ ತೆಪ್ಪೋತ್ಸವ ನಡೆಯಿತು.
ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆದ ಶ್ರೀ ಶಾರದಾಂಬಾ ಮಹಾರಥೋತ್ಸವದ ಅಂಗವಾಗಿ ಬುಧವಾರ ರಾತ್ರಿ ತುಂಗಾ ನದಿಯಲ್ಲಿ ವಿಜೃಂಭಣೆಯ ತೆಪ್ಪೋತ್ಸವ ನಡೆಯಿತು.ಇದಕ್ಕೂ ಮೊದಲು ಅಮ್ಮನವರಿಗೆ ಅವಭೃತ, ಸಂದಾನೋತ್ಸವ ನಡೆಯಿತು. ಜಗದ್ಗುರುಗಳಿಂದ ವಿಶೇಷ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯವಿಧಿವಿಧಾನಗಳು ನಡೆಯಿತು. ತೆಪ್ಪೋತ್ಸವದ ಅಂಗವಾಗಿ ತುಂಗಾನದಿ ತೀರದಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ತೆಪ್ಪೋತ್ಸವದೊಂದಿಗೆ ಶಾರದಾಂಬಾ ಮಹಾರಥೋತ್ಸವದ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ತೆಪ್ಪೋತ್ಸವವನ್ನು ವೀಕ್ಷಿಸಿದರು.29 ಶ್ರೀ ಚಿತ್ರ 2-
ಶೃಂಗೇರಿ ಶ್ರೀ ಶಾರದಾ ಪೀಠದಲ್ಲಿ ವಿಜೃಂಭಣೆಯ ತೆಪ್ಪೋತ್ಸವ ನಡೆಯಿತು.;Resize=(128,128))
;Resize=(128,128))
;Resize=(128,128))