ಶಿಗ್ಗಾಂವಿ ಪಟ್ಟಣದಲ್ಲಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ವಿವಿಧ ವಾರ್ಡನ ಓಣಿಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಶಿಗ್ಗಾಂವಿ: ಪಟ್ಟಣದಲ್ಲಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ವಿವಿಧ ವಾರ್ಡನ ಓಣಿಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು.

ಮೆರವಣಿಗೆಯಲ್ಲಿ ಯುವಕರು, ಮಕ್ಕಳು ಹಾಗೂ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಡಿ.ಜೆ. ಸಂಗೀತದ ತಾಳಕ್ಕೆ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಗಣೇಶ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿದ ಹಿನ್ನೆಲೆಯಲ್ಲಿ ಶಿಗ್ಗಾಂವಿ ಪಟ್ಟಣ ಸಂಪೂರ್ಣ ಜನಜಂಗುಳಿಯಿಂದ ಕೂಡಿತ್ತು.

ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಪೋಲೀಸ್ ಬಂದೋ ಬಸ್ತ್ ಕೈಗೊಂಡಿದ್ದರು. ಪ್ರಮುಖ ಸ್ಥಳಗಳಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಿಸಿ, ಮೆರವಣಿಗೆ ಸುಗಮವಾಗಿ ಸಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಗಣೇಶ ಮೂರ್ತಿಗಳ ವಿಸರ್ಜನೆಯೊಂದಿಗೆ ಹಲವು ದಿನಗಳಿಂದ ಪಟ್ಟಣದಲ್ಲಿ ನಡೆದ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ ಬಿದ್ದಿತು. ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತರು ಭಕ್ತಿ ಹಾಗೂ ಸಂಭ್ರಮದಿಂದ ಗಣೇಶನಿಗೆ ವಿದಾಯ ಹೇಳಿದರು.

ಸಚಿವ ಜೋಶಿ, ಭರತ್ ಬೊಮ್ಮಾಯಿ ಭಾಗಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ ಅವರುಗಳು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿ ಯುವಕರ ಜೊತೆ ಹೆಜ್ಜೆ ಹಾಕಿ ಸಂಭ್ರಮಿಸಿದರು.