ಸಾರಾಂಶ
ಕೊಪ್ಪಳ:
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದಲ್ಲಿ ಶನಿವಾರ ಶ್ರೀಕೃಷ್ಣನ ಭಾವಚಿತ್ರದ ಭವ್ಯ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಭಗವಾನ್ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ಮೆರವಣಿಗೆಗೆ ನಗರದ ಹುಲಿಕೆರೆ ರಸ್ತೆಯ ಸಿರಸಪ್ಪಯ್ಯನ ಮಠದ ಓಣಿಯ ವಡಕರಾಯ ದೇವಸ್ಥಾನ ಹತ್ತಿರ ಚಾಲನೆ ನೀಡಲಾಯಿತು.
ಈ ವೇಳೆ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹಾಗೂ ಸಮಾಜದ ಮುಖಂಡರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರುಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಯಾದವ ಸಮಾಜದ ಜಿಲ್ಲಾಧ್ಯಕ್ಷ ಕುರುಗೋಡ ರವಿ, ತಾಲೂಕು ಅಧ್ಯಕ್ಷ ವೆಕ್ಕಂಪ್ಪ ಕಟ್ಟಿಮನಿ, ಮುಖಂಡರಾದ ಯಮನೂರಪ್ಪ ಭಂಗ್ಲೇರ, ಜಗನ್ನಾಥ ಹುಲಿಗಿ, ರಮೇಶ ನಾಗೇಶನಹಳ್ಳಿ, ಭೀಮಣ್ಣ ಲೇಬಗೇರಿ, ಸುರೇಶ ಗೊಲ್ಲರ, ರೇಣುಕಾ ಪೂಜಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮೆರವಣಿಗೆ:ಶ್ರೀಕೃಷ್ಣ ಭಾವಚಿತ್ರದ ಮೆರವಣಿಗೆ ವಡಕರಾಯ ದೇವಸ್ಥಾನ ಆವರಣದಿಂದ ಪ್ರಾರಂಭಗೊಂಡು ಗಡಿಯಾರ ಕಂಬದ ವರೆಗೆ ನಡೆಯಿತು. ರಾಧಾ-ಕೃಷ್ಣ ವೇಷದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಎಲ್ಲರ ಗಮನ ಸೆಳೆದರು. ಮೆರವಣಿಗೆಯಲ್ಲಿ ಸಮಾಜದ ಮುಖಂಡರು, ಮಹಿಳೆಯರು, ಯುವಕರು, ಮಕ್ಕಳು ಭಾಗವಹಿಸಿದ್ದರು.