ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ೧೦೬೬ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನ ಸುತ್ತೂರು ಮಠದಿಂದ ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವ ಮೂರ್ತಿ ಹಾಗೂ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಳವಳ್ಳಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಹಸ್ರರು ಸಂಖ್ಯೆಯಲ್ಲಿ ಭಕ್ತರು ಜಯಘೋಷದೊಂದಿಗೆ ಮೂರ್ತಿಗೆ ಪೂಜೆ ಸಲ್ಲಿಕೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ೧೦೬೬ನೇ ಜಯಂತ್ಯುತ್ಸವದ ಅಂಗವಾಗಿ ಮೈಸೂರಿನ ಸುತ್ತೂರು ಮಠದಿಂದ ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವ ಮೂರ್ತಿ ಹಾಗೂ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಳವಳ್ಳಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಹಸ್ರರು ಸಂಖ್ಯೆಯಲ್ಲಿ ಭಕ್ತರು ಜಯಘೋಷದೊಂದಿಗೆ ಮೂರ್ತಿಗೆ ಪೂಜೆ ಸಲ್ಲಿಸಿ ಜಾನಪದ ಕಲಾ ತಂಡದೊಂದಿಗೆ ಬರಮಾಡಿಕೊಂಡರು.

ಮಂಗಳವಾದ್ಯ ಹಾಗೂ ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆಯೊಂದಿಗೆ ತಿ.ನರಸೀಪುರದ ಮೂಲಕ ಮಳವಳ್ಳಿ ತಾಲೂಕಿನ ಗಡಿಭಾಗವಾದ ಚಿಕ್ಕಬಾಗಿಲು ಗ್ರಾಮಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡರು.

ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಂದಿಕಂಬಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಮೆರವಣಿಗೆಗೆ ಹಾಗೂ ಜಯಂತಿಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರ ಮುಭಾಗಕ್ಕೆ ಆಗಮಿಸಿದ ಶ್ರೀಗಳ ಉತ್ಸವಮೂರ್ತಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೂವಿನ ಹಾರಹಾಕಿ ಪೂಜೆ ಸಲ್ಲಿಸಿದರು. ನಂತರ ಶ್ರೀದೇಗುಲ ಮಠದ ಕಿರಿಯ ಸ್ವಾಮೀಜಿಯೊಂದಿಗೆ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಟನಮನ ಸಲ್ಲಿಸಿದರು.

ಬೆಳಕವಾಡಿ, ಬೋಪ್ಪೇಗೌಡನಪುರ (ಬಿಜಿಪುರ) ಹೋಬಳಿಯ ಚಿಕ್ಕಬಾಗಿಲು, ಪೂರಿಗಾಲಿ, ಸರಗೂರು, ಮುಟ್ಟನಹಳ್ಳಿ, ಬಿಜಿಪುರ, ಬೆಳಕವಾಡಿ ಹಾಗೂ ಹೊಸಹಳ್ಳಿ, ಪಂಡಿತಹಳ್ಳಿ ಗ್ರಾಮಗಳ ಮಾರ್ಗವಾಗಿ ಮಳವಳ್ಳಿಗೆ ಬಂದ ಸಂದರ್ಭದಲ್ಲಿ ಶ್ರೀಗಳ ಉತ್ಸವ ಮೂರ್ತಿಗೆ ಭಕ್ತಿ ಪ್ರಧಾನವಾಗಿ ಪೂಜೆ ಸಲ್ಲಿಸಿದರು.

ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ನಂದಿಕಂಬ ಕುಣಿತ ವೀರಗಾಸೆ, ಪೂಜಾ ಕುಣಿತ ಡೊಳ್ಳು ಕುಣಿತ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಮೆರವಣಿಗೆಯಲ್ಲಿ ಗಮನ ಸೆಳೆಯಿತು. ಇದೇ ಸಂದರ್ಭದಲ್ಲಿ ವಿವಿಧ ಮಠಗಳ ಮಠಾಧೀಶರು. ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಮುಖಂಡ ಯಮದೂರು ಸಿದ್ದರಾಜು, ಅಶೋಕ್ ಸೇರಿದಂತೆ ಇತರರು ಇದ್ದರು.