ಕೃಷ್ಣಾ ಮತ್ತು ಭೀಮಾ ನದಿ ಪಾತ್ರದಲ್ಲಿ ಮಹಾರಾಷ್ಟ್ರ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ಪ್ರಶ್ನಿಸುತ್ತೇವೆ. ನದಿ ನೀರಿನ ನಮ್ಮ ನ್ಯಾಯ ಸಮ್ಮತ ಪಾಲು ಪಡೆಯಲು ಕಾನೂನು ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿಕೃಷ್ಣಾ ಮತ್ತು ಭೀಮಾ ನದಿ ಪಾತ್ರದಲ್ಲಿ ಮಹಾರಾಷ್ಟ್ರ ಸರ್ಕಾರ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳ ಬಗ್ಗೆ ಪ್ರಶ್ನಿಸುತ್ತೇವೆ. ನದಿ ನೀರಿನ ನಮ್ಮ ನ್ಯಾಯ ಸಮ್ಮತ ಪಾಲು ಪಡೆಯಲು ಕಾನೂನು ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಸಚಿವರು, ಭೀಮಾ ನದಿ ನೀರಿನ ಪಾಲು ಪಡೆಯಲು ಕಾನೂನು ಹೋರಾಟ ಯಾವ ಸ್ವರೂಪದಲ್ಲಿರಬೇಕು ಎಂಬ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಮುಖ್ಯಮಂತ್ರಿಗಳೊಂದಿಗೆ ಈ ವಿಷಯ ಚರ್ಚಿಸಲಾಗಿದೆ ಎಂದರು.ಮಹಾರಾಷ್ಟ್ರ ಸರ್ಕಾರ ಕೃಷ್ಣೆಯ ಉಗಮ ಸ್ಥಾನವಾಗಿರುವ ಮಹಾಬಲೇಶ್ವರದಲ್ಲಿ ಭಾರಿ ನೀರೆತ್ತುವ ಯೋಜನೆ ರೂಪಿಸುತ್ತಿದೆ ಎಂಬ ವರದಿಗಳಿಗೆವೆ. ಇಲ್ಲಿಂದ 40 ಟಿಎಂಸಿ ನೀರನ್ನೆತ್ತುವ ಯೋಜನೆ ಇದೆ ಎಂಬಂಶ ವರದಿಯಾಗಿದ್ದು, ಇಂತಹ ಯೋಜನೆಗಳನ್ನು ನಾವು ಸಾರಾಸಾಗಾಟಾಗಿ ವಿರೋಧಿಸುತ್ತೇವೆ. ನಮ್ಮ ರಾಜ್ಯಕ್ಕೆ ಹರಿದು ಬರುವ ನೀರಿನ ಪ್ರಮಾಣದ ಮೇಲೆ ಇದರಿಂದ ಬಾರಿ ಹೊಡೆತ ಉಂಟಾಲಿದೆ ಎಂದು ಖರ್ಗೆ ಹೇಳಿದರು.ಭೀಮಾ ನದಿಗೆ ನೀರು ಬಿಡುಗಡೆ ಮಾಡುವ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದ್ದು, ಮುಖ್ಯ ಕಾರ್ಯದರ್ಶಿಯೂ ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಜ್ಯದ ಹಿತಾಸಕ್ತಿ ಕಾಪಾಡಲು ಒಗ್ಗಟ್ಟಿನಿಂದ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದರು.*ಕುಡಿವ ನೀರಿನ ಸಮಸ್ಯೆಗೆ ಸ್ಪಂದನೆ: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸದಿರುವ ಕಡೆಗಳಲ್ಲಿಯೂ ಸರ್ಕಾರ ಅಗತ್ಯ ಸಹಕಾರ ನೀಡುತ್ತಿದೆ. ಆದರೆ ಕೆಲವು ಕಡೆ ಪ್ರಕೃತಿಯೇ ನೀರಿನ ಲಭ್ಯತೆಗೆ ಅಡ್ಡಿಯಾಗಿರುವಾಗ ಸರ್ಕಾರದಿಂದಲೂ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಮಂಗಳೂರು ಮತ್ತು ಉಡುಪಿಯಂತಹ ಪ್ರದೇಶಗಳಲ್ಲಿಯೂ ಹಣ ನೀಡಿದರೂ ನೀರು ಸಿಗದ ಪರಿಸ್ಥಿತಿ ಇದೆ ಎಂದರು.ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಟಾಸ್ಕ್‌ಫೋರ್ಸ್ ರಚಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲು ಸರ್ಕಾರ ಸಿದ್ಧವಿದೆ. ಶಾಸಕರಿಗೆ ತಮ್ಮ ಕ್ಷೇತ್ರದ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಸ್ವಾತಂತ್ರ್ಯ ನೀಡಲಾಗಿದೆ. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಬೋರ್‌ವೆಲ್ ಕೊರೆದರೂ ನೀರು ಸಿಗದ ಉದಾಹರಣೆಗಳಿವೆ. ಪ್ರಕೃತಿಯ ವಿರುದ್ಧ ಏನೂ ಮಾಡಲು ಸಾಧ್ಯವಿಲ್ಲ. ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ವ್ಯವಸ್ಥೆಯ ಮೇಲೆಯೂ ನಿಯಂತ್ರಣ ಅಗತ್ಯವಿದೆ ಎಂದರು.