ಬೆಂಗಳೂರನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್‌ ನಾಯಕ

| Published : Jul 03 2024, 12:22 AM IST

ಸಾರಾಂಶ

ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿದ ಕೆಂಪೇಗೌಡರ ಭಾವಚಿತ್ರವನ್ನು ರಾಜ್ಯ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಅಳವಡಿಸಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿದ ಕೆಂಪೇಗೌಡರ ಭಾವಚಿತ್ರವನ್ನು ರಾಜ್ಯ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಅಳವಡಿಸಬೇಕು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.ತಾಲೂಕಿನ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ನಡೆದ ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಂಪೇಗೌಡರು ಒಕ್ಕಲಿಗ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಎಲ್ಲಾ ಧರ್ಮ ಮತ್ತು ಸಮುದಾಯಗಳಿಗೆ ಸಮಾನತೆ ನೀಡಿ ಸಣ್ಣ ಸಣ್ಣ ಕೈಗಾರಿಕೆಗಳಿಗೆ ಹೆಚ್ಚು ಆದ್ಯತೆ ನೀಡಿ ಬೆಂಗಳೂರು ನಗರವನ್ನು ವಿಶ್ವ ವಿಖ್ಯಾತಿಯಾಗುವಂತೆ ಮಾಡಿದರು. ಪ್ರಗತಿ ಮತ್ತು ಸಮಾನತೆಯ ಹರಿಕಾರ, ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪುತ್ತಳಿಯನ್ನು ಕೇಂದ್ರ ಸರ್ಕಾರ ಸಂಸತ್ ಭವನದ ಮುಂದೆ ಸ್ಥಾಪನೆ ಮಾಡಬೇಕು ಎಂದರು. ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಶ್ರೀಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭದ್ರಾವತಿ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆ ಮತ್ತು ದೇಶದ ಗಮನ ಸೆಳೆದ ಹೆಚ್ಎಂಟಿ ಕೈಗಡಿಯಾರ ಕಾರ್ಖಾನೆಯನ್ನು ಪುನಃ ಚೇತನಗೊಳಿಸುವಂತೆ ಒತ್ತಾಯಪಡಿಸಿದ್ದೇವೆ. ನಮ್ಮ ಮನವಿಗೆ ಸ್ಪಂದಿಸಿ ಭದ್ರಾವತಿ ಉಕ್ಕಿನ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ಸ್ವಾಗತಾರ್ಹ. ಕೇಂದ್ರ ಸರ್ಕಾರದ ಸ್ವಾಮ್ಯತೆಯ ಕೈಗಾರಿಕೆಗಳಲ್ಲಿ ಸ್ಥಳೀಯ ನಿರುದ್ಯೋಗವಂತ ಯುವಕರಿಗೆ ಉದ್ಯೋಗ ನೀಡುವ ಮೂಲಕ ಸ್ಥಳೀಯರಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು. ನಾದೂರು ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷೆ ಮೆಹರ್ ತಾಜ್ ಬಾಬು, ಹೊಸಮನೆ ರಂಗನಾಥ್, ಸದಸ್ಯ ನಾಗೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವಿಜಯಕುಮಾರ್, ಮಂಜುನಾಥ ಸ್ವಾಮಿ, ಜೆಡಿಎಸ್ ಯುವ ಮುಖಂಡ ಕೆ .ಸಿ. ರಂಗನಾಥ್, ಕರವೇ ಶ್ರೀನಿವಾಸ್, ಡೈರಿ ರಂಗನಾಥ್, ರಾಜಣ್ಣ, ರೇವಣ್ಣ, ತಮ್ಮಣ್ಣ, ನಿರಂಜನ್ ಮಂಜುನಾಥ ಗುಪ್ತ, ಸೈಯದ್ಉಸ್ಮಾನ್, ಕುಮಾರ್, ವೀರ ಕ್ಯಾತಪ್ಪ , ಚಂದ್ರಶೇಖರ್ ಸೇರಿದಂತೆ ಹಲವರು ಹಾಜರಿದ್ದರು.