ಸಾರಾಂಶ
ಚಿತ್ರದುರ್ಗ: ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ವಿಶಾಲವಾದ ಮೈದಾನದಲ್ಲಿ ಜ.28ರಂದು ನಡೆಯಲಿರುವ ಶೋಷಿತ ಸಮುದಾಯಗಳ ಬೃಹತ್ ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ತಾಲೀಮು ಆರಂಭಿಸಿದ್ದಾರೆ. ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಡಾ.ಬಿ.ತಿಪ್ಪೇಸ್ವಾಮಿ ಗುರುವಾರ ಚಿತ್ರದುರ್ಗದಲ್ಲಿ ಭರ್ಜರಿ ಬೈಕ್ ಆಯೋಜಿಸಿ ಗಮನ ಸೆಳೆದರು. ಹೆಚ್ಚಿನ ಸಂಖ್ಯೆಯಲ್ಲಿ ಶೋಷಿತರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಆಗಮಿಸುವಂತೆ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಿಂದ ಹೊರಟ ಬೈಕ್ ರ್‍ಯಾಲಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬೈಕ್‍ರ್ಯಾಲಿಗೆ ಚಾಲನೆ ನೀಡಿ ದ್ವಿಚಕ್ರ ವಾಹನದಲ್ಲಿ ಸುತ್ತಾಡಿದರು. ಕಾನೂನು ಕಾಲೇಜು ಮುಂಭಾಗದ ರಸ್ತೆಯಿಂದ ಜೋಗಿಮಟ್ಟಿ ರೋಡ್, ಆನೆಬಾಗಿಲು, ಬುರುಜನಹಟ್ಟಿ, ಕನಕ ವೃತ್ತ, ಗಾಂಧಿ ಸರ್ಕಲ್, ಹೊರಪೇಟೆ, ಜೆಸಿ ಆರ್ , ಕವಾಡಿಗರಹಟ್ಟಿ, ಮುರುಘಾಮಠದ ಕಡೆ ಸಂಚರಿಸಿ ಅಂತಿಮವಾಗಿ ಒನಕೆ ಓಬವ್ವ ವೃತ್ತದಲ್ಲಿ ಬೈಕ್ ರ್ಯಾಲಿ ಮುಕ್ತಾಯಗೊಂಡಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ನಜ್ಮತಾಜ್, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಬಿ.ಟಿ.ಜಗದೀಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತ ನಂದಿನಿಗೌಡ, ಯು.ಲಕ್ಷ್ಮಿಕಾಂತ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಬಿ.ರಾಜಣ್ಣ, ಕರ್ನಾಟಕ ರಾಜ್ಯ ಮುಸ್ಲಿಂ ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಎಂ.ಹನೀಫ್ ಇನ್ನು ಮೊದಲಾಧವರು ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.-----
ಶೋಷಿತರ ಸಮಾವೇಶದ ಸಿದ್ಧತೆ ಪರಿಶೀಲನೆಚಿತ್ರದುರ್ಗ: ನಗರದ ಹೊರವಲಯ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಶೋಷಿತ ಸಮುದಾಯಗಳ ಬೃಹತ್ ಜಾಗೃತಿ ಸಮಾವೇಶಕ್ಕೆ ಬೃಹಧಾಕಾರವಾದ ಪೆಂಡಾಲ್ ಸಿದ್ದವಾಗುತ್ತಿರುವುದನ್ನು ಕಾಂಗ್ರೆಸ್ ನಾಯಕರುಗಳು ಹಾಗೂ ಶೋಷಿತ ಸಮುದಾಯಒಕ್ಕೂಟದ ಸದಸ್ಯರು ಗುರುವಾರ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ ರಾಜ್ಯದ ವಿವಿಧ ಭಾಗಗಳಿಂದ ಹತ್ತು ಲಕ್ಷಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮಾವೇಶ ಯಶಸ್ಸಿಗೆ ಹಲವು ತಂಡಗಳು ಹಗಲಿರುಳು ಶ್ರಮಿಸುತ್ತಿವೆ. ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ ಪಾಲ್ಗೊಂಡು ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ ಎಂದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಬಿ.ಟಿ.ಜಗದೀಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹೆಚ್.ಶಬ್ಬೀರ ಭಾಷಾ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮಧುಗೌಡ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಮಲ್ಲೇಶ್, ಜಿಲ್ಲಾ ಕಾಂಗ್ರೆಸ್ ಎಸ್ಸಿ ವಿಭಾಗದ ಅಧ್ಯಕ್ಷ ಜಯಣ್ಣ, ಹೆಚ್.ಆರ್.ಮಹಮದ್, ಫೈಲ್ವಾನ್ ಸಾಧಿಕ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.