ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್‌ ಸಂತ: ಡಾ.ಎಸ್.ಎಸ್. ಪಾಟೀಲ

| Published : Nov 19 2024, 12:48 AM IST

ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್‌ ಸಂತ: ಡಾ.ಎಸ್.ಎಸ್. ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧಭಾವ ಮೀರಿಸುವಂತೆ ಸಮಾಜದ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್‌ ಸಂತ ಕನಕದಾಸರು ಎಂದು ತಾಲೂಕು ಹಾಲುಮತದ ಅಧ್ಯಕ್ಷ ಡಾ.ಎಸ್.ಎಸ್. ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧಭಾವ ಮೀರಿಸುವಂತೆ ಸಮಾಜದ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್‌ ಸಂತ ಕನಕದಾಸರು ಎಂದು ತಾಲೂಕು ಹಾಲುಮತದ ಅಧ್ಯಕ್ಷ ಡಾ.ಎಸ್.ಎಸ್. ಪಾಟೀಲ ಹೇಳಿದರು.

ಪಟ್ಟಣದ ತಹಸೀಲ್ದಾರ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ನಡೆದ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಹಸೀಲ್ದಾರ ಶಿವಾನಂದ ಬಬಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಿಇಒ ಅಜಿತ ಮನ್ನಿಕೇರಿ, ಹನುಮಂತ ಗುಡ್ಲಮನಿ, ರಮೇಶ ಸನ್ನಕ್ಕಿ ಮಾತನಾಡಿದರು.

ಸಿಡಿಪಿಒ ಯಲ್ಲಪ್ಪ ಗದಾಡಿ, ಹೆಸ್ಕಾಂ ಎಇಇ ಎಂ.ಎಸ್. ನಾಗನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸ್‍ಐ ರಾಜು ಪೂಜೇರಿ, ತಾಪಂ ಅಧಿಕಾರಿ ಸಂಗಮೇಶ ರೋಡ್ಡನವರ, ಶಿರಸ್ತೇದಾರ ಪರುಶುರಾಮ ನಾಯ್ಕ, ಡಿಎಸ್‍ಎಸ್ ಮುಖಂಡರು, ಪುರಸಭೆ ಸದಸ್ಯರು ಮತ್ತಿತರರು ಉಪಸ್ಥಿರಿದ್ದರು.

ಕಲ್ಲೋಳಿ: ಕನಕದಾಸರು ಕುಲ, ಜಾತಿಗಳ ಸಂಕೋಲೆಗಳನ್ನು ಕಿತ್ತು, ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂಬ ಸಂದೇಶ ಸಾರಿದ ಅವರ ಸಮಸಮಾಜದ ಬೋಧನೆಗಳು, ಆಧ್ಯಾತ್ಮಿಕ ಚಿಂತನೆಗಳು ಸಮಸ್ತ ಮನುಕುಲಕ್ಕೆ ಮಾರ್ಗದರ್ಶಕಗಳಾಗಿವೆ ಎಂದು ಬಸವರಾಜ ಕಡಾಡಿ ಹೇಳಿದರು.

ತಾಲೂಕಿನ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಕನಕದಾಸರ 537ನೇ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ದಾರ್ಶನಿಕರಾಗಿ, ಕನ್ನಡ ನಾಡಿನ ಸಾಂಸ್ಕತಿಕ ಪರಂಪರೆಗೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.

ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನಿರ್ದೆಶಕರಾದ ಪರಪ್ಪ ಮಳವಾಡ, ಬಾಳಪ್ಪ ಸಂಗಟಿ, ಮಲ್ಲಿಕಾರ್ಜುನ ಹುಲೆನ್ನವರ, ಹಣಮಂತ ಕಲಕುಟ್ರಿ, ವಿಠ್ಠಲ ಜಟ್ಟೆನ್ನವರ, ಪ್ರಶಾಂತ ಪಟ್ಟಣಶೆಟ್ಟಿ, ಶಿವಾನಂದ ಕಡಾಡಿ, ಸಂಸದರ ಆಪ್ತಕಾರ್ಯದರ್ಶಿ ಸಂತೋಷ ಬಡಿಗೇರ, ಬಿ.ಆರ್. ಪಾಟೀಲ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆ: ತಾಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ದಾಸವರಣ್ಯ ಕನಕದಾಸರ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಡಾ.ಸುರೇಶ ಹನಗಂಡಿ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.