ಅಜ್ಜಂಪುರ ವಿದ್ಯಾರ್ಥಿಗಳು ಸತತವಾಗಿ ಮೂರು ವರ್ಷ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದುಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಾಲಾಕ್ಷಪ್ಪ ತಿಳಿಸಿದರು.

ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ವಿತರಣೆ

ಕನ್ನಡಪ್ರಭ ವಾರ್ತೆ, ಅಜ್ಜಂಪುರ

ವಿದ್ಯಾರ್ಥಿಗಳು ಸತತವಾಗಿ ಮೂರು ವರ್ಷ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದುಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪಾಲಾಕ್ಷಪ್ಪ ತಿಳಿಸಿದರು.

ಜಿಲ್ಲಾ ಮಟ್ಟದ ವಿಕಲಚೇತನರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪದಕ ಮತ್ತು ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿ ಈ ವಿಶೇಷ ಸಾಧನೆಗೆ ವಿದ್ಯಾರ್ಥಿಗಳ ನಿರಂತರ ಅಭ್ಯಾಸ ಪರಿಶ್ರಮ ಮತ್ತು ಬದ್ಧತೆ ಕಾರಣ. ಇವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರಪ್ಪ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಕ್ರೀಡಾಪಟುಗಳು ಈ ಒಂದು ಮಹತ್ತರ ಸಾಧನೆ ಮಾಡಲು ಸಹಕಾರಿಯಾಗಿದೆ ಈ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಮಟ್ಟದ ವಿಕಲಚೇತನರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಶ್ರೀ ಬಿಂದು ಗುಂಡು ಮತ್ತು ಜಾವಲಿನ್ ಎಸೆತ ಮತ್ತು 100 ಮೀ. ಓಟದಲ್ಲಿ ಪ್ರಥಮ ಸ್ಥಾನ. ಪೋಷಿತ್ ಗುಂಡು ಎಸೆತ ಮತ್ತು ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದರು. ಈ ವಿದ್ಯಾರ್ಥಿಗಳು ಸತತ ಮೂರು ವರ್ಷ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧನೆ ಮಾಡಿದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ದೈಹಿಕ ಶಿಕ್ಷಣ ಪರೀವೀಕ್ಷಕ ಮಹೇಶ್, ವೇದಮೂರ್ತಿ, ಜಯದೇವಪ್ಪ, ಪರಮೇಶ್ವರಪ್ಪ ಹಾಗೂ ಜಿಲ್ಲಾ ಗ್ರೇಡ್ -1 ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರೇಗೌಡ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕಕರ ಸಂಘದ ಅಧ್ಯಕ್ಷ ಚಂದ್ರಪ್ಪ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಮಾರಸ್ವಾಮಿ ಜಿಲ್ಲಾ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪೈರೋಜ್, ಚಿಕ್ಕಮಗಳೂರು ತಾಲೂಕು ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ. ಬೀರೂರು ವಲಯದ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು ಮುಂತಾದವರು ಉಪಸ್ಥಿತರಿದ್ದರು.ಬಗ್ಗವಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹ್ಯಾಟ್ರಿಕ್ ಸಾಧನೆ :-ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ