ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯಿಂದ ಆರೋಗ್ಯಯುತ ಸಮಾಜ

| Published : Sep 16 2024, 01:48 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಎಲ್ಲರು ವೈಯಕ್ತಿಕ ಸ್ವಚ್ಛತೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹಿಸಿ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಎಲ್ಲರು ವೈಯಕ್ತಿಕ ಸ್ವಚ್ಛತೆ ಹಾಗೂ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಂಡರೆ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ ಎಂದು ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪುರಸಭೆ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪುರಸಭೆ ಪೌರಕಾರ್ಮಿಕರು ಪ್ರತಿ ಮನೆಗಳ ಕಸ ಸಂಗ್ರಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹಿಸಿ ಪಟ್ಟಣದ ಸ್ವಚ್ಛತೆಗೆ ಶ್ರಮಿಸುತ್ತಿದ್ದಾರೆ. ಅವರೊಂದಿಗೆ ನಾವು ಸಹಕರಿಸಿದರೆ ಸುಂದರ ಪಟ್ಟಣವಾಗುತ್ತದೆ ಎಂದರು.ಪುರಸಭೆ ಸದಸ್ಯೆ ಜಗದೇವಿ ಗುಂಡಳ್ಳಿ ಮಾತನಾಡಿ, ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕದೇ ಕಸದ ತೊಟ್ಟಿಗಳಲ್ಲಿ ಹಾಕಬೇಕು. ಅಂಗಡಿ, ಮನೆಗಳ ಮಾಲೀಕರು ಕಸ ವಿಲೇವಾರಿ ವಾಹನಕ್ಕೆ ಹಾಕುವ ಮೂಲಕ ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಿದರು.ಪುರಸಭೆ ಸದಸ್ಯ ಅಶೋಕ ಹಾರಿವಾಳ ಮಾತನಾಡಿ, ಸರ್ಕಾರ ಎಲ್ಲರ ಆರೋಗ್ಯಕ್ಕಾಗಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ. ಅದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಬಸ್ ನಿಲ್ದಾಣ, ಶಾಲಾ, ಕಾಲೇಜು, ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಕಸ ಹಾಕಿದರೆ ಅವರಿಗೆ ತಿಳುವಳಿಕೆ ಹೇಳುವಂತೆ ತಿಳಿಸಿದರು.ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿ, ಸ್ವಚ್ಛತೆಯ ಮಹತ್ವ ತಿಳಿಸಲು ಮಾನವ ಸರಪಳಿ, ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ, ತ್ಯಾಜ್ಯ ವಸ್ತುಗಳಿಂದ ತಯಾರಿಸಿದ ವಸ್ತುಗಳ ಪ್ರದರ್ಶನ, ಬೀದಿ ನಾಟಕ ಸೇರಿ ಹಲವಾರು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.ಪುರಸಭೆ ಸದಸ್ಯ ಪ್ರವೀಣ ಪೂಜಾರಿ, ಮುಖಂಡರಾದ ಸಂಜೀವ ಕಲ್ಯಾಣಿ, ಶರಣಪ್ಪ ಬೆಲ್ಲದ, ಹಿರಿಯ ಆರೋಗ್ಯ ನಿರೀಕ್ಷಕ ವಿಜಯಕುಮಾರ ವಂದಾಲ, ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಕಚೇರಿ ವ್ಯವಸ್ಥಾಪಕ ಸುರೇಶ ಬಾಗೇವಾಡಿ, ಸತ್ಯಪ್ಪ ಪೂಜಾರಿ, ರಾಜು ರಾಠೋಡ, ಲಕ್ಷ್ಮೀ ರಾಂಪೂರ, ನೀಲಾ ಬಳವಾಟ, ರಾವುತಪ್ಪ ಮ್ಯಾಗೇರಿ ಇದ್ದರು.ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು.