ಸಾರಾಂಶ
ಚನ್ನಪಟ್ಟಣ: ತಾಲೂಕಿನ ಹೊಂಗನೂರು ಗ್ರಾಮದ ಕೆರೆಯ ಬಳಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.
ಚನ್ನಪಟ್ಟಣ: ತಾಲೂಕಿನ ಹೊಂಗನೂರು ಗ್ರಾಮದ ಕೆರೆಯ ಬಳಿ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. ತಾಲೂಕಿನ ಹೊಂಗನೂರು ಕೆರೆಯ ಬಳಿ ಬುಧವಾರ ಸುಮಾರು 6 ಆನೆಗಳ ಹಿಂಡು ಕಾಣಿಸಿಕೊಂಡಿದ್ದು, ಆನೆಗಳನ್ನು ನೋಡಲು ಜನ ಕೆರೆ ಸುತ್ತ ಜಮಾಯಿಸಿದ್ದರು. ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದರು. ಸಂಜೆಯ ಹೊತ್ತಿಗೆ ಹೊಂಗನೂರು ಕೆರೆಯ ಬಳಿಯಿಂದ ಆನೆಗಳ ಹಿಂಡು ಬೇರೆಡೆಗೆ ಹೊರಟ್ಟಿದ್ದು, ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿ ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟುವ ಕಾರ್ಯಾಚರಣೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.