ಸಾರಾಂಶ
ಅಂಬೇಡ್ಕರ್ ಅಸ್ಪೃಶ್ಯತೆಯ ನಿವಾರಣೆ ಹಾಗೂ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ನಾಯಕ. ಅವರ ಆದರ್ಶ ಜೀವನ ಪ್ರತಿಯೊಬ್ಬರು ಪಾಲಿಸಬೇಕು ಎಂದು ತಾಲೂಕು ದಂಡಾಧಿಕಾರಿ ಉಮಾಕಾಂತ್ ಹಳ್ಳೆ ಹೇಳಿದರು.
ಕನ್ನಡಪ್ರಭ ವಾರ್ತೆ ಶಹಾಪುರ
ಅಂಬೇಡ್ಕರ್ ಅಸ್ಪೃಶ್ಯತೆಯ ನಿವಾರಣೆ ಹಾಗೂ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ನಾಯಕ. ಅವರ ಆದರ್ಶ ಜೀವನ ಪ್ರತಿಯೊಬ್ಬರು ಪಾಲಿಸಬೇಕು ಎಂದು ತಾಲೂಕು ದಂಡಾಧಿಕಾರಿ ಉಮಾಕಾಂತ್ ಹಳ್ಳೆ ಹೇಳಿದರು.ನಗರಸಭೆ ಆವರಣದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ 134ನೇ ಜಯಂತಿ ಅಂಗವಾಗಿ ಸೋಮವಾರ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಆಯೋಜಿಸಿದ್ದ ಭವ್ಯ ಮೆರವಣಿಗೆ ನಂತರ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸರ್ವ ಜನಾಂಗಕ್ಕೂ ಸಮಾನತೆ ತೋರಿದ ಮಹಾನ್ ಮಾನವತಾವಾದಿಯ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ ಮಾತನಾಡಿ, ಡಾ. ಅಂಬೇಡ್ಕರ್ ಸಂವಿಧಾನದ ಮೂಲಕ ಭಾರತವನ್ನು ಸಮಾನತೆ, ಸಮತೆ, ಭ್ರಾತೃತ್ವ ಮತ್ತು ಜಾತ್ಯತೀತ ಪರಿಕಲ್ಪನೆಗಳ ಅಡಿಯಲ್ಲಿ ನಿರ್ಮಿಸುವುದಕ್ಕೆ ಅಡಿಪಾಯ ಹಾಕಿದರು ಎಂದರು.ವಿಶೇಷ ಉಪನ್ಯಾಸ ನೀಡಿದ ಹಿರಿಯ ದಲಿತ ಮುಖಂಡ ಶ್ರೀಶೈಲ ಹೊಸಮನಿ ಮಾತನಾಡಿ, ಸಾಮಾಜಿಕ ಪ್ರಜಾಪ್ರಭುತ್ವವೆಂದರೆ ಸ್ವಾತಂತ್ರ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳನ್ನು ಒಪ್ಪುವ ಪದ್ಧತಿ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದರು ಎಂದರು.
ಸಹಾಯಕ ಖಜಾನೆ ಅಧಿಕಾರಿ ಡಾ. ಎಂ. ಎಸ್. ಶಿರವಾಳ ಮಾತನಾಡಿ, ಡಾ.ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಅಪಾರ ತಾರತಮ್ಯವನ್ನು ಅನುಭವಿಸಿದ್ದರೂ, ಎಲ್ಲ ಅಡೆತಡೆಗಳನ್ನು ನಿವಾರಿಸಿಕೊಂಡು ಸಾಮಾಜಿಕ ಬದಲಾವಣೆಯ ಸಂಕೇತವಾಗಲು ಮುಂದಾದರು ಎಂದರು.ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ನಗರಸಭೆ ಅಧ್ಯಕ್ಷೆ ಮೆಹರೂನ್ ಬೇಗಂ, ಪೌರಾಯುಕ್ತ ರಮೇಶ್ ಬಡಿಗೇರ್, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ರಸ್ತಾಪುರ್, ಹಿರಿಯ ದಲಿತ ಮುಖಂಡರಾದ ಮಲ್ಲಿಕಾರ್ಜುನ ಪೂಜಾರಿ, ಶಿವಪುತ್ರ ಜವಳಿ ಇದ್ದರು,