ಹಂಗಳ ಡೇರಿ ಚುನಾವಣೇಲಿ ಕೈ ಗೆ ಭರ್ಜರಿ ಜಯ!

| Published : Jan 16 2024, 01:47 AM IST

ಸಾರಾಂಶ

ಗುಂಡ್ಲುಪೇಟೆತಾಲೂಕಿನ ಹಂಗಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಕಾಡಾ ಮಾಜಿ ಅಧ್ಯಕ್ಷ ಎಚ್‌.ಎಸ್.ನಂಜಪ್ಪ ಬೆಂಬಲಿಗರು ೧೨ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ದಾರೆ. ಈ ಬಾರಿಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲೇಬೇಕು ಹಠಕ್ಕೆ ಬಿದ್ದಿದ್ದ ಹಂಗಳ ಗ್ರಾಮದ ಬಿಜೆಪಿಗರಿಗೆ ಡೇರಿ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲಲಾರದೆ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಗೆದ್ದು ಬೀಗಿದ ಕಾಂಗ್ರೆಸ್‌ ಅಭ್ಯರ್ಥಿಗಳು । ಎಲ್ಲಾ ಸ್ಥಾನದಲ್ಲಿ ಸೋಲೊಪ್ಪಿಕೊಂಡ ಬಿಜೆಪಿ ಕಲಿಗಳು

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ತಾಲೂಕಿನ ಹಂಗಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಕಾಡಾ ಮಾಜಿ ಅಧ್ಯಕ್ಷ ಎಚ್‌.ಎಸ್.ನಂಜಪ್ಪ ಬೆಂಬಲಿಗರು ೧೨ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ದಾರೆ. ಈ ಬಾರಿಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲೇಬೇಕು ಹಠಕ್ಕೆ ಬಿದ್ದಿದ್ದ ಹಂಗಳ ಗ್ರಾಮದ ಬಿಜೆಪಿಗರಿಗೆ ಡೇರಿ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲಲಾರದೆ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘದ ೧೨ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ಎಲ್ಲಾ ೧೨ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ ಅಧಿಕಾರ ಪಡೆದಂತಾಗಿದೆ. ಈ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಬೆಂಬಲಿಗರನ್ನು ಗೆಲ್ಲಿಸಿಕೊಳ್ಳುವ ಮೂಲಕ ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ತನ್ನ ಪ್ರಾಭಲ್ಯವನ್ನು ಮೆರೆದಿದ್ದಾರೆ. ಕಾಂಗ್ರೆಸ್‌ ಬೆಂಬಲಿತರಾದ ಸಿ.ಎನ್.ನಾಗಪ್ಪ, ನಾಗಮಲ್ಲಪ್ಪ,ಎಚ್.ವಿ.ಬಸಪ್ಪ,ಎಚ್.ಕೆ.ಮಹದೇವಪ್ಪ,ರಾಮ,ವೀರತಪ್ಪ,ಜವರಯ್ಯ,ನಿಂಗರಾಜು,ಜಿ.ಮಂಜು,ಎಚ್‌.ಆರ್‌ .ನಾಗೇಶ್‌,ದೊಡ್ಡಮ್ಮ,ಮಂಗಳಮ್ಮ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ಪದ್ಮನಾಭ ಘೋಷಿಸಿದರು. ಈ ಸಮಯದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾಂಗ್ರೆಸ್‌ಗೆ ಹಾಗೂ ನಂಜಪ್ಪಣ್ಣಂಗೆ ಜೈಕಾರ ಮೊಳಗಿಸಿದರು. ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ,ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ನಟೇಶ್‌,ಪಿಎಲ್‌ಡಿ ಬ್ಯಾಂಕ್‌ ಮಾಜಿ ಅಧ್ಯಕ್ಷ ಗಂಗಪ್ಪ,ಹಾಪ್‌ ಕಾಮ್ಸ್‌ ಮಾಜಿ ಅಧ್ಯಕ್ಷ ಡಿ.ಬಿ.ಶಿಕುಮಾರ್‌,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ ಅಧ್ಯಕ್ಷ ಎಚ್.ಎಂ.ಮಹೇಶ್‌,ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರು,ಮಾಜಿ ನಿರ್ದೇಶಕರು,ಗ್ರಾಪಂ ಸದಸ್ಯ ವೃಷಬೇಂದ್ರ ಸೇರಿದಂತೆ ಗ್ರಾಮದ ಕಾಂಗ್ರೆಸ್‌ ಮುಖಂಡರು ಇದ್ದರು.ಬಿಜೆಪಿಗೆ ಮುಖಭಂಗ:

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಪ್ರಣಯ್‌ ಅವರ ತವರು ಹಂಗಳ ಡೇರಿಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ೧೨ ಮಂದಿ ಅಭ್ಯರ್ಥಿಗಳೆಲ್ಲರು ಸೋಲು ಕಂಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಪ್ರಭಲ ಪ್ರತಿಸ್ಪರ್ಧಿಯಾಗಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸ್ಥಾನ ಗೆಲ್ಲಲೇಬೇಕು ಎಂದು ಗ್ರಾಮದ ಬಿಜೆಪಿ ಮುಂಚೂಣಿ ಮುಖಂಡರು ಭಾರಿ ಶ್ರಮ ಹಾಕಿದ್ದರು. ಡೇರಿ ಚುನಾವಣೆ ಫಲಿತಾಂಶ ಬಂದ ನಂತರ ಬಿಜೆಪಿ ಬೆಂಬಲಿತರು ಒಬ್ಬರು ಗೆಲ್ಲಲಿಲ್ಲ. ಇದು ನಿಜಕ್ಕೂ ಬಿಜೆಪಿ ಮುಖಂಡರಿಗೆ ಇರಿಸು ಮುರಿಸು ಆಗಿದೆ ಎಂದು ಹೆಸರೇಳಲಿಚ್ಚಿಸಿದ ಬಿಜೆಪಿ ಮುಖಂಡರೊಬ್ಬರು ಒಪ್ಪಿಕೊಂಡಿದ್ದಾರೆ.