ಸಾರಾಂಶ
ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ ಸ್ಫೋಟವಾದ ಘಟನೆ ಹಾನಗಲ್ಲ ತಾಲೂಕಿನ ಹೀರೆಬಾಸೂರು ಗ್ರಾಮದಲ್ಲಿ ನಡೆದಿದೆ.
ಹಾವೇರಿ: ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ ಸ್ಫೋಟವಾದ ಘಟನೆ ಹಾನಗಲ್ಲ ತಾಲೂಕಿನ ಹೀರೆಬಾಸೂರು ಗ್ರಾಮದಲ್ಲಿ ನಡೆದಿದೆ.
ಹೀರೆಬಾಸೂರು ಗ್ರಾಮದ ನಿವಾಸಿ ಶಶಿಧರ್ ಎಂಬವರ ಮನೆಯಲ್ಲಿ ಸ್ಫೋಟವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ನಾಡಬಾಂಬ್ ಸಂಗ್ರಹಿಸಿಟ್ಟಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಸಜ್ಜಾದ ಮೇಲೆ ಸಂಗ್ರಹಿಸಿಡಲಾಗಿತ್ತು.ಏಕಾಏಕಿ ನಾಡಬಾಂಬ್ ಸ್ಫೋಟದಿಂದ ಮನೆ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಮನೆಯಲ್ಲಿ ಯಾರೂ ಇಲ್ಲದೆ ವೇಳೆ ನಾಡಬಾಂಬ್ ಸ್ಫೋಟವಾಗಿರುವ ಕಾರಣ ಯಾವುದೇ ಜೀವಹಾನಿಯಾಗಿಲ್ಲ.ಅಕ್ರಮ ನಾಡಬಾಂಬ್ ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಶಿಕುಮಾರ್ ಮತ್ತು ಕುಮಾರ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ತಂಡ ಭೇಟಿ ನೀಡಿ ಮನೆ ಪರಿಶೀಲನೆ ನಡೆಸಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.