ನಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭಾರೀ ಬಹುಮತದೊಂದಿಗೆ ಜಯಗಳಿಸಿದ್ದಾರೆ. ಇದೆ ವೇಳೆ ಗೆದ್ದಂತಹ ಅಭ್ಯರ್ಥಿಗಳಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅಭಿನಂದಿಸಿದರು. ಹಾಸನ ತಾಲೂಕಿನಲ್ಲಿ ರಾಜಕೀಯ ಗಾಳಿ ಯಾವ ದಿಕ್ಕಿನಲ್ಲಿ ಬೀಸುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿದೆ. ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ನಿಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭಾರೀ ಬಹುಮತದೊಂದಿಗೆ ಜಯಗಳಿಸಿದ್ದಾರೆ. ಇದೆ ವೇಳೆ ಗೆದ್ದಂತಹ ಅಭ್ಯರ್ಥಿಗಳಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅಭಿನಂದಿಸಿದರು.

ಸಾಮಾನ್ಯ ವರ್ಗದಿಂದ ಗಂಗಾಧರ, ನಟರಾಜು, ಹುಚ್ಚೆಗೌಡ್ರು, ಮಂಜುನಾಥ್ ಮತ್ತು ಮಂಜುಶಟ್ಟಿ ಅವರು ಜಯಭೇರಿ ಬಾರಿಸಿದ್ದಾರೆ. ಇನ್ನೂ ಮಹಿಳಾ ಮೀಸಲು ಸ್ಥಾನದಲ್ಲಿ ಪದ್ಮ ಹಾಗೂ ಶಂತಮ್ಮ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ವರ್ಗದಿಂದ ಮಲ್ಲೇಶ್, ಪ್ರವರ್ಗ ಎಯಿಂದ ಪರಮೇಶಪ್ಪ, ಪ್ರವರ್ಗ ಬಿಯಿಂದ ಲಿಂಗರಾಜು ಅವರು ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ವರ್ಗಗಳಲ್ಲಿಯೂ ಸ್ಪಷ್ಟ ಮುನ್ನಡೆ ಸಾಧಿಸಿ ಆಡಳಿತ ಮಂಡಳಿಯಲ್ಲಿ ಬಹುಮತ ಪಡೆದಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಬೆಂಬಲಿಗರು ಸಂಭ್ರಮಾಚರಣೆ ನಡೆಸಿ ಪರಸ್ಪರ ಸಿಹಿ ಹಂಚಿಕೊಂಡರು. ನೂತನವಾಗಿ ಆಯ್ಕೆಯಾದ ನಿರ್ದೇಶಕರು ಹಾಲು ಉತ್ಪಾದಕರ ಹಿತಾಸಕ್ತಿ ರಕ್ಷಣೆ, ಸಂಘದ ಆರ್ಥಿಕ ಬಲವರ್ಧನೆ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಮಾತನಾಡಿ, ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಮುಖಂಡರು, ನಿಟ್ಟೂರು ಭಾಗದ ಫಲಿತಾಂಶವು ಹಾಸನ ತಾಲೂಕಿನಲ್ಲಿ ರಾಜಕೀಯ ಗಾಳಿ ಯಾವ ದಿಕ್ಕಿನಲ್ಲಿ ಬೀಸುತ್ತಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿದೆ. ಕಾರ್ಯಕರ್ತರು ಹಾಗೂ ಹಿರಿಯ ಮುಖಂಡರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ ಎಂದು ಹೇಳಿದರು.

ಗೆಲುವಿಗೆ ಶ್ರಮಿಸಿದಂತಹ ಎಲ್ಲಾ ಹಿರಿಯ ಮುಖಂಡರಿಗೆ ಹಾಗೂ ಗೆದ್ದಂತಹ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸುವುದಾಗಿ ಹೇಳಿದರು. ಹಾಸನ ವಿಧಾನಸಭಾ ಕ್ಷೇತ್ರದ ಚುನಾವಣೆಯ ಶಕ್ತಿ ಏನಾದರೂ ನೋಡಬೇಕು ಎಂದು ನೋಡಿದರೇ ನಿಟ್ಟೂರು ಗ್ರಾಪಂನಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗುರಿಯಾಗಿಸಿಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಿ, ಇನ್ನು ರಾಜ್ಯದಲ್ಲಿ 130ರಿಂದ 140 ಸೀಟುಗಳ ಗೆಲ್ಲುವುದರ ಮೂಲಕ ಸ್ವಂತ ಶಕ್ತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ರಾಜ್ಯಾಧ್ಯಕ್ಷರ ಮತ್ತು ಹಿರಿಯ ಮುಖಂಡರ ಅಪೇಕ್ಷೆ ಇದೆ. ಇದಕ್ಕೆ ಪೂರಕವಾಗಿ ಇರುವ ಇನ್ನೆರಡು ವರ್ಷಗಳ ಕಾಲ ಪಕ್ಷಕ್ಕೆ ಗೌರವ ತರುವ ಕೆಲಸ ಮಾಡೋಣ ಎಂದು ಕರೆ ನೀಡಿದರು.