ಕಲಿಕೆಯನ್ನು ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿ-ಯಲ್ಲವ್ವ ದುರಗಣ್ಣವರ

| Published : Feb 26 2025, 01:01 AM IST

ಕಲಿಕೆಯನ್ನು ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿ-ಯಲ್ಲವ್ವ ದುರಗಣ್ಣವರ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳು ಮತ್ತು ಶಿಕ್ಷಕರು, ಪೋಷಕರು ಹಾಗೂ ಸಮುದಾಯದ ಸದಸ್ಯರನ್ನು ಪರಸ್ಪರ ಭೇಟಿಯಾಗಲು, ಅವರನ್ನು ಸಂತಸದಾಯಕ ವಾತಾವರಣದ ಕಡೆಗೆ ಸ್ವಾಗತಿಸಲು ಮತ್ತು ಕಲಿಕೆಯ ಅವಕಾಶವನ್ನು ಸಮುದಾಯದೊಂದಿಗೆ ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಪುರಸಭೆಯ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಹೇಳಿದರು.

ಲಕ್ಷ್ಮೇಶ್ವರ: ಮಕ್ಕಳು ಮತ್ತು ಶಿಕ್ಷಕರು, ಪೋಷಕರು ಹಾಗೂ ಸಮುದಾಯದ ಸದಸ್ಯರನ್ನು ಪರಸ್ಪರ ಭೇಟಿಯಾಗಲು, ಅವರನ್ನು ಸಂತಸದಾಯಕ ವಾತಾವರಣದ ಕಡೆಗೆ ಸ್ವಾಗತಿಸಲು ಮತ್ತು ಕಲಿಕೆಯ ಅವಕಾಶವನ್ನು ಸಮುದಾಯದೊಂದಿಗೆ ವಿಸ್ತರಿಸಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಪುರಸಭೆಯ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ ನಂ 2ರಲ್ಲಿ ಜರುಗಿದ ಉತ್ತರ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಕ್ಲಸ್ಟರ ಒಳಗಿನ ಶಾಲೆಗಳು ತಮ್ಮೊಳಗಿರುವ ಉತ್ತಮ ಅಭ್ಯಾಸಗಳನ್ನು ಪರಸ್ಪರ ಹಂಚಿಕೊಳ್ಳಲು ಇದು ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.ಈ ವೇಳೆ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಲಾಪೂರ ಮಾತನಾಡಿ, ಶಿಕ್ಷಕರು, ಪಾಲಕರು ಹಾಗೂ ಸಮುದಾಯವು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಗ್ಗೂಡುವುದು ಅಗತ್ಯವಾಗಿದೆ ಎಂದು ಹೇಳಿದರು.

ಬಿ.ಆರ್.ಪಿ ಈಶ್ವರ ಮೆಡ್ಲೇರಿ ಮಾತನಾಡಿ ಕಲಿಕಾ ಹಬ್ಬವು ಶೈಕ್ಷಣಿಕ ಪರಿಸರದ ಬೆಂಬಲ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು. ಪರಸ್ಪರ ಹಂಚಿಕೊಂಡ ಕಲಿಕೆಯ ಅನುಭವಗಳು ಮಕ್ಕಳ ಹಾಗೂ ಶಾಲೆಯ ಸಾಮೂಹಿಕ ಬೆಳವಣಿಗೆ ಮತ್ತು ಸುಧಾರಣೆಯನ್ನು ಪ್ರೋತ್ಸಾಹಿಸುತ್ತವೆ ಎಂದರು.ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಗುರು ಹವಳದ, ಕಾರ್ಯದರ್ಶಿ ಎಂ.ಎ. ನದಾಫ, ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರ ಕಾಂತ ನೇಕಾರ, ಖಜಾಂಚಿ ಬಿ .ಬಿ.ಯತ್ತಿನಹಳ್ಳಿ, ಉಪಾಧ್ಯಕ್ಷ ಎಲ್.ಎನ್.ನಂದೆಣ್ಣವರ, ಗೀತಾ ಹಳ್ಯಾಳ, ಜಿಲ್ಲಾ ವಿಶೇಷ ಚೇತನ ನೌಕರರ ಸಂಘದ ಅಧ್ಯಕ್ಷ ಆರ್‌.ಎಂ.ಶಿರಹಟ್ಟಿ, ಬಿಆರ್‌ಪಿ ಬಿ .ಎಂ.ಯರಗುಪ್ಪಿ, ಸಿ.ಆರ್. ಪಿ ಸತೀಶ ಬೋಮಲೆ, ಎನ್.ಎ. ಮುಲ್ಲಾ, ಗಿರೀಶ್ ನೇಕಾರ, ಜ್ಯೋತಿ ಗಾಯಕವಾಡ, ಮುಖ್ಯ ಶಿಕ್ಷಕ ಎಚ್‌.ಬಿ.ಸಣ್ಣಮನಿ, ಬಿ.ಎಮ್.ಕುಂಬಾರ, ಡಿ.ಎನ್.ದೊಡ್ಡಮನಿ, ಎಲ್ .ಕೆ.ಹೆಬ್ಬಳ್ಳಿ , ಎಸ್.ಎನ್.ತಾಯಮ್ಮನವರ ಇದ್ದರು.

ಸಿಆರ್‌ಪಿ ಉಮೇಶ ನೇಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಮುಖ್ಯ ಶಿಕ್ಷಕಿ ಎಸ್.ಎಸ್. ಜಿರಂಕಳಿ ಸ್ವಾಗತಿಸಿದರು. ಸಿ.ಎಫ್.ಪಾಟೀಲ ವಂದಿಸಿದರು. ಎನ್.ಎಸ್.ಬಂಕಾಪುರ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೇಶ್ವರ ನಗರ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಹಾಗೂ ಲಕ್ಷ್ಮೇಶ್ವರ ಉತ್ತರ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಶಾಲೆ ಮಕ್ಕಳು ಇದ್ದರು.