ಈ ನಾಡಿನ ಉದ್ದಗಲಕ್ಕೂ ಅಖಂಡ ಕರ್ನಾಟಕ ಒಗ್ಗೂಡಿಸಲು ಬಿಡುವಿಲ್ಲದ ಸಂದರ್ಭದಲ್ಲೂ ವಿನೂತನ, ವಿಶಿಷ್ಟ ಹೋರಾಟವನ್ನು ಸದನದಲ್ಲೂ ಮಾಡಿ ನಾಡಿನ ಅಸ್ಮಿತೆಗಾಗಿ ಕಳೆದ 70ಕ್ಕೂ ಹೆಚ್ಚು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿರುವ ವಾಟಾಳ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವುದನ್ನು ತೀವ್ರ ಖಂಡನೀಯ.
ಕನ್ನಡಪ್ರಭ ವಾರ್ತೆ ಮಂಡ್ಯ
ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕನ್ನಡ ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್ಯಯಕರ್ತರು, ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದರು. ಕೆಲ ಕಾಲ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು.
ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರಿಗೆ ಅಯೋಗ್ಯ ಹಾಗೂ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು ಅಪಮಾನಿಸಿರುವ ಬಿಜೆಪಿ ಕಾರ್ಯಕರ್ತರು ಈ ನಾಡಿನ ಕನ್ನಡ ಹೋರಾಟಗಾರರಿಗೆ ಮಾಡಿದ ಅಪಮಾನವಾಗಿದೆ ಎಂದು ದೂರಿದರು.ಈ ನಾಡಿನ ಉದ್ದಗಲಕ್ಕೂ ಅಖಂಡ ಕರ್ನಾಟಕ ಒಗ್ಗೂಡಿಸಲು ಬಿಡುವಿಲ್ಲದ ಸಂದರ್ಭದಲ್ಲೂ ವಿನೂತನ, ವಿಶಿಷ್ಟ ಹೋರಾಟವನ್ನು ಸದನದಲ್ಲೂ ಮಾಡಿ ನಾಡಿನ ಅಸ್ಮಿತೆಗಾಗಿ ಕಳೆದ 70ಕ್ಕೂ ಹೆಚ್ಚು ವರ್ಷಗಳಿಂದ ನಿರಂತರ ಹೋರಾಟ ಮಾಡುತ್ತಿರುವ ವಾಟಾಳ್ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸಿದರು. ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಮುಖಂಡರಾದ ಕುಮಾರ ಕೆ.ಪಿ., ಪಾಂಡುರಂಗ, ಜಯಮ್ಮ, ಶಿವಾಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮೇ ೩೧ರಂದು ವಿಶ್ವಕರ್ಮ ಮಹಾಸಭಾದಿಂದ ಪ್ರತಿಭಾ ಪುರಸ್ಕಾರಕನ್ನಡಪ್ರಭ ವಾರ್ತೆ ಮಂಡ್ಯಅಖಿಲ ಕರ್ನಾಟಕ ವಿಶ್ವಕರ್ಮ ಮಹಾ ಸಭಾದಿಂದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ ೩೧ರಂದು ಬೆಂಗಳೂರು ಟೌನ್‌ಹಾಲ್‌ನ ಪುಟ್ಟಣ್ಣಚೆಟ್ಟಿನಾಡ್ ಪುರಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಮದ್ದೂರು ತಾಲೂಕು ಅಧ್ಯಕ್ಷ ಎಂ.ಪಿ.ಮಹೇಶ್ ತಿಳಿಸಿದರು.
ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಸಾರಥ್ಯದಲ್ಲಿ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಶೇ.೭೫ಕ್ಕೂ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಮೇ ೨೫ರೊಳಗೆ ನೋಂದಾಯಿಸಿಕೊಳ್ಳುವಂತೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.ನೋಂದಣಿಗೆ ಸಮಾಜದವರ ವಾಟ್ಸಾಪ್ ಗ್ರೂಪ್‌ಗಳಲ್ಲಿ ಅರ್ಜಿ ಹಂಚಿಕೊಳ್ಳಲಾಗಿದೆ. ಅರ್ಹರು ೨ ಫೋಟೋ, ಫಲಿತಾಂಶ ಪ್ರಮಾಣ ಪತ್ರ, ಜಾತಿ ದೃಢೀಕರಣ ಪತ್ರದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಂಘದ ಕೆ.ಸುಂದ್ ಅವರ ವಾಟ್ಸಾಪ್ ಸಂಖ್ಯೆ ೯೮೮೬೪೨೩೯೩೫ಗೆ ಕಳುಹಿಸುವಂತೆ ಮನವಿ ಮಾಡಿದರು.ಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಬಸವರಾಜು, ಮುಖಂಡರಾದ ದೇವರಾಜು, ಪ್ರಕಾಶ್, ಈಶ್ವರಾಚಾರ್, ಎಂ.ಎನ್.ಕುಮಾರ್ ಇದ್ದರು.