ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ತುಳುನಾಡಿನ ಜನರ ಬಹುದಿನಗಳ ಕನಸು ನನಸಾದ ಐತಿಹಾಸಿಕ ಕ್ಷಣ. ತುಳು ಭಾಷೆಯ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಹೇಳಿದರು.

ಕಾರ್ಕಳ : ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ತುಳುನಾಡಿನ ಜನರ ಬಹುದಿನಗಳ ಕನಸು ನನಸಾದ ಐತಿಹಾಸಿಕ ಕ್ಷಣ. ತುಳು ಭಾಷೆಯ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಹೇಳಿದರು.ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ತುಳು ಸಂಘಟನೆಗಳ ವತಿಯಿಂದ ಕಾರ್ಕಳದ ಅನಂತಶಯನ ವೃತ್ತದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.

ಮಿಯ್ಯರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ಮಾತನಾಡಿ, ತುಳುವಿಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ಪ್ರತಿಯೊಬ್ಬ ತುಳು ಅಭಿಮಾನಿಗೂ ಹೆಮ್ಮೆಯ ಸಂಗತಿ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಸುಭಿತ್ ಎನ್.ಆರ್., ಕೆಎಂಎಫ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ಡಿಸೋಜ, ಸುನಿಲ್ ಭಂಡಾರಿ, ಸಂತೋಷ್ ದೇವಾಡಿಗ ಹಾಗೂ ಪ್ರದೀಪ್ ಬೇಲಾಡಿ ಮತ್ತಿತರರಿದ್ದರು.