ಸಾರಾಂಶ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸುಕ್ಷೇತ್ರ ಶ್ರೀಶೈಲದಲ್ಲಿ ಯುಗಾದಿ ಪಾಢ್ಯವಾದ ಭಾನುವಾರ ಸಂಜೆ ಮಲ್ಲಿಕಾರ್ಜುನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು.
ಕನ್ನಡಪ್ರಭ ವಾತೆ ರಬಕವಿ-ಬನಹಟ್ಟಿ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸುಕ್ಷೇತ್ರ ಶ್ರೀಶೈಲದಲ್ಲಿ ಯುಗಾದಿ ಪಾಢ್ಯವಾದ ಭಾನುವಾರ ಸಂಜೆ ಶ್ರೀ ಮಲ್ಲಿಕಾರ್ಜುನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು.ಓಂ ನಮಃ ಶಿವಾಯ ಘೋಷಣೆ ಮುಗಿಲು ಮುಟ್ಟಿತ್ತು. ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು ಸೇರಿದಂತೆ ರಾಜ್ಯ, ನೆರೆಯ ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ರಾಜ್ಯಗಳ ಲಕ್ಷಾಂತರ ಭಕ್ತರು ಭಾಗಿಯಾಗಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಪಾದಯಾತ್ರೆ ಮೂಲಕ ತೆರಳಿದ್ದರು.