ಡ್ಯಾಂನಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು

| Published : Sep 17 2024, 12:51 AM IST

ಡ್ಯಾಂನಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಭಾನುವಾರ ರಾತ್ರಿ ಪಾಳ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಇಗ್ಗಲೂರು ಡ್ಯಾಂಗೆ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ಭಾರತೀನಗರ: ಇಗ್ಗಲೂರು ಡ್ಯಾಂನಲ್ಲಿ ಕಾಲುಜಾರಿ ಬಿದ್ದು ಹಾಗಲಹಳ್ಳಿಯ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಎಸ್.ಐ.ಹಾಗಲಹಳ್ಳಿ ಮಲ್ಲೇಶ್(50) ಮೃತಪಟ್ಟವರು. ಮೃತ ಮಲ್ಲೇಶ್ ಇಗ್ಗಲೂರು ಡ್ಯಾಂನಲ್ಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ಪಾಳ್ಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಕಾಲು ಜಾರಿ ಇಗ್ಗಲೂರು ಡ್ಯಾಂಗೆ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ. ಮೃತರಿಗೆ ಪತ್ನಿ, ಓರ್ವ ಪುತ್ರ ಇದ್ದಾರೆ. ಮೃತರ ಅಂತ್ಯಸಂಸ್ಕಾರ ಎಸ್.ಐ.ಹಾಗಲಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಚನ್ನಪಟ್ಟಣ ತಾಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.