ಸಾರಾಂಶ
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧರ್ಮಸ್ಥಳ ಸಂಸ್ಥೆ ರಾಜ್ಯಾದ್ಯಂತ ಮದ್ಯವರ್ಜನ ಶಿಬಿರ ಆಯೋಜಿಸಿ ದುಶ್ಟಟ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಬೂಕನಕೆರೆ ಗ್ರಾಮದಲ್ಲಿ ನ.18 ರಿಂದ 25ರವರೆಗೆ 8 ದಿನಗಳ ಕಾಲ ಸಂಸ್ಥೆಯಿಂದ 1887 ಶಿಬಿರ ನಡೆಯುತ್ತಿದೆ.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ನ.18ರಿಂದ 25ರವರೆಗೆ ಬೃಹತ್ ಮದ್ಯ ವರ್ಜನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆ ಯೋಜನಾಧಿಕಾರಿ ತಿಲಕ್ ರಾಜ್ ತಿಳಿಸಿದ್ದಾರೆ.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧರ್ಮಸ್ಥಳ ಸಂಸ್ಥೆ ರಾಜ್ಯಾದ್ಯಂತ ಮದ್ಯವರ್ಜನ ಶಿಬಿರ ಆಯೋಜಿಸಿ ದುಶ್ಟಟ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಬೂಕನಕೆರೆ ಗ್ರಾಮದಲ್ಲಿ ನ.18 ರಿಂದ 25ರವರೆಗೆ 8 ದಿನಗಳ ಕಾಲ ಸಂಸ್ಥೆಯಿಂದ 1887 ಶಿಬಿರ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬೂಕನಕೆರೆ ಪಂಚಾಯತ್ ಸಮುದಾಯ ಭವನದಲ್ಲಿ ನ.18ರಂದು ಶಿಬಿರವನ್ನು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಉದ್ಘಾಟಿಸುವರು, ಗ್ರಾಪಂ ಅಧ್ಯಕ್ಷ ಬಿ.ಆರ್.ಶ್ಯಾಂಪ್ರಸಾದ್ ಅಧ್ಯಕ್ಷತೆ ವಹಿಸುವರು. ಗ್ರಾಮ ಮುಖಂಡರಾದ ವಿಜಯರಾಮೇಗೌಡ, ಬಿ.ಟಿ.ವೆಂಕಟೇಶ್, ಬಿ.ಜವರಾಯಿಗೌಡ, ಹುಲ್ಲೇಗೌಡ, ಗ್ರಾಮಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ವಿವಿಧ ದಿನಗಳಂದು ಶಿಬಿರದಲ್ಲಿ ನಡೆಯಲಿರುವ ಗುಂಪು ಸಲಹೆ, ಕೌಟುಂಬಿಕ ಸಲಹೆ ಕಾರ್ಯದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸಕ ಬಲ್ಲೇನಹಳ್ಳಿ ಮಂಜುನಾಥ್, ಜಿ.ವಿ.ಕೆ ಮೈಸೂರು ಪ್ರಾದೇಶಿಕ ವಿಭಾಗದ ಯೋಜನಧಿಕಾರಿ ಮೂಕಾಂಬಿಕ, ಹಿರಿಯ ಪತ್ರಕರ್ತ ಎಂ.ಕೆ.ಹರಿಚರಣತಿಲಕ್, ಬೂಕನಕೆರೆ ಸಮುದಾಯ ಆರೋಗ್ಯ ಕೇಂದ್ರದ ಡಾ.ಶ್ರೀನಿವಾಸ್, ಎಂ.ಸುಷ್ಮಾಕುಮಾರಿ, ಸಿ.ಆರ್.ಪಿ ಎ.ಎನ್.ಮಹೇಶ್, ಸೋಮನಹಳ್ಳಿ ಸಂಗಮೇಶ್ವರ ಪ್ರೌಢಶಾಲೆಯ ಸಹಶಿಕ್ಷಕ ಪುರುಷೋತ್ತಮ್, ವಕೀಲರಾದ ನಂದಿನಿ ಆಗಮಿಸಲಿದ್ದಾರೆ.
ನ.25 ರಂದು ಸಮಾರೋಪ ಸಮಾರಂಭವನ್ನು ಶಾಸಕ ಎಚ್.ಟಿ.ಮಂಜು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಧರ್ಮಸ್ಥಳ ಸಂಸ್ಥೆ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಜಯರಾಮ್ ತೋಟಿ, ರಾಜ್ಯ ಆರ್.ಟಿ.ಓ ಅಧಿಕಾರಿಗಳ ಸಂಘದ ಮಲ್ಲಿಕಾರ್ಜುನ್, ಜನ ಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಶೀಳನೆರೆ ಅಂಬರೀಷ್, ಸದಸ್ಯರಾದ ಅಕ್ಕಿಹೆಬ್ಬಳು ರಘು ಮತ್ತು ಪ್ರಸನ್ನ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಲವು ಸಂಘಗಳು, ಸಹಕಾರ ಸಂಸ್ಥೆಗಳು, ಮುಖಂಡರು ಸಹಕಾರದಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.