ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ

| Published : May 20 2024, 01:43 AM IST / Updated: May 20 2024, 11:57 AM IST

ಸಾರಾಂಶ

ಅಪ್ಪಾಜಿಯ ನಾಯಕತ್ವದಲ್ಲಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಭದ್ರವಾಗಿದೆ, ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಾಗಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಂಡಿತ ಸಿಗಲಿದೆ, ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಏಳಿಗೆಗೆ ಶ್ರಮಿಸುತ್ತೇವೆ.

 ದಾಬಸ್‌ಪೇಟೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 92ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ಹಣ್ಣು- ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದ್ದೇವೆ, ಅವರಿಗೆ ದೇವರು ಮತ್ತಷ್ಟು ಆಯಸ್ಸು ನೀಡಲಿ ಎಂದು ಜಿಪಂ ಮಾಜಿ ಸದಸ್ಯ ಟಿ.ಆರ್.ರಾಜು ಹೇಳಿದರು.

ತ್ಯಾಮಗೊಂಡ್ಲು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಹೋಬಳಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ 92ನೇ ವರ್ಷದ ಜನ್ಮದಿನಾಚರಣೆಯ ಅಂಗವಾಗಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು- ಹಂಪಲು ವಿತರಿಸಿ ಮಾತನಾಡಿದರು.

ಅಪ್ಪಾಜಿಯ ನಾಯಕತ್ವದಲ್ಲಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಭದ್ರವಾಗಿದೆ, ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಾಗಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಂಡಿತ ಸಿಗಲಿದೆ, ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಏಳಿಗೆಗೆ ಶ್ರಮಿಸುತ್ತೇವೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತರಾಜು ಮಾತನಾಡಿ, ಜೆಡಿಎಸ್ ಪಕ್ಷ ರಾಜ್ಯದಲ್ಲಿ ಬಲಗೊಳ್ಳಲು ದೇವೇಗೌಡರ ಶ್ರಮ ಹಾಗೂ ಮಾರ್ಗದರ್ಶನ ಅಗತ್ಯ, ಅವರ ಅನುಭವದ ರಾಜಕಾರಣ ಎಲ್ಲರಿಗೂ ಮಾದರಿಯಾಗಿದ್ದು, ಅವರು ಪ್ರಧಾನಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದವರು, ಇಂದು ಅವರ ಜನ್ಮದಿನಾಚರಣೆ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.

ಗ್ರಾಪಂ ಸದಸ್ಯ ಸುಜಿತ್ ಕುಮಾರ್, ಮಾಜಿ ಸದಸ್ಯ ಜಗದೀಶ್ ಪ್ರಸಾದ್, ಗೋಪಿನಾಥ್, ಮಾಜಿ ಅಧ್ಯಕ್ಷೆ ಮಂಜುಳಾ, ಮುಖಂಡರಾದ ಲಕ್ಷ್ಮೀನಾರಾಯಣ್, ಡೈರಿ ನಾಗರಾಜು, ಫಷಿ, ಯುವ ಮುಖಂಡ ಭೈರೇಗೌಡ, ಬಿಜೆಪಿ ಹೋಬಳಿ ಪ್ರಧಾನ ಕಾರ್ಯದರ್ಶಿ ಗಂಗರಾಜು, ಮೂರ್ತಿ, ಸ್ವಾಮಿ, ತಾವರೆಕೆರೆ ಕಾಂತರಾಜು ಸೇರಿ ಜೆಡಿಎಸ್ ಮತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.