ನಾಳೆ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್‌ ಬೆಂಬಲಿಗರ ಸಭೆ

| Published : Apr 02 2024, 01:04 AM IST

ನಾಳೆ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್‌ ಬೆಂಬಲಿಗರ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಸದೆ ಸುಮಲತಾ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯ ಚಿತ್ರವನ್ನು ನಟ ದರ್ಶನ್ ಬಿಡುಗಡೆ ಮಾಡುವ ಮೂಲಕ ವಾಸ್ತವ ಚಿತ್ರಣವನ್ನು ಜನತೆಯ ಮುಂದಿಡಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಂಸದೆ ಸುಮಲತಾ ಅಂಬರೀಶ್ ಅವರ ಬೆಂಬಲಿಗರು, ಹಿತೈಷಿಗಳು, ಮಾರ್ಗದರ್ಶಕರು, ಕಾರ್ಯಕರ್ತರು, ಅಭಿಮಾನಿಗಳ ಸಭೆ ಏ. ೩ರ ಬುಧವಾರ ಬೆಳಗ್ಗೆ ೧೦.೩೦ಕ್ಕೆ ನಗರದ ಕಾಳಿಕಾಂಬ ಸಮುದಾಯ ಭವನದ ಆವರಣದಲ್ಲಿ ನಡೆಯಲಿದೆ ಎಂದು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ತಿಳಿಸಿದರು.

ಈ ಸಭೆಗೆ ನಟ ದರ್ಶನ್ ಮತ್ತು ಅವರ ಅಭಿಮಾನಿಗಳು, ಸುಮಲತಾ ಪುತ್ರ ಅಭಿಷೇಕ್ ಅಂಬರೀಷ್ ಸೇರಿದಂತೆ ಮಂಡ್ಯ ಜಿಲ್ಲೆಯ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ. ಸುಮಾರು ೫ ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು. ಎಂದರು.

ನಗರದ ಗ್ರಾಮದೇವತೆ ಶ್ರೀ ಕಾಳಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಸಂಸದೆ ಸುಮಲತಾ ಅಂಬರೀಷ್ ಸಭೆಗೆ ಚಾಲನೆ ನೀಡಲಿದ್ದಾರೆ. ಸಂಸದೆ ಸುಮಲತಾ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ನಡೆದಿರುವ ಪ್ರಮುಖ ಅಭಿವೃದ್ಧಿ ಕಾರ್ಯಗಳ ಸಾಕ್ಷ್ಯ ಚಿತ್ರವನ್ನು ನಟ ದರ್ಶನ್ ಬಿಡುಗಡೆ ಮಾಡುವ ಮೂಲಕ ವಾಸ್ತವ ಚಿತ್ರಣವನ್ನು ಜನತೆಯ ಮುಂದಿಡಲಾಗುವುದು. ಜೊತೆಗೆ ಫಲಾನುಭವಿಗಳ ಅನಿಸಿಕೆಗಳನ್ನು ಪ್ರದರ್ಶಿಸಲಾಗುವುದು ಎಂದರು.

ಬೆಂಗಳೂರಿಗೆ ಹೋಗಿದ್ದವರೆಲ್ಲರೂ ಸುಮಲತಾ ಸ್ಪರ್ಧೆಗೆ ಒತ್ತಡ ಹಾಕಿದ್ದಾರೆ. ಸ್ಪರ್ಧೆಯ ನಿರೀಕ್ಷೆಯಲ್ಲಿದ್ದೇವೆ. ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಮಾರಂಭಕ್ಕೆ ಅಂಬರೀಶ್ ಮತ್ತು ದರ್ಶನ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಮುಖಂಡರಾದ ಮಳವಳ್ಳಿ ಚೌಡೇಗೌಡ, ಬೆಳಗೊಳ ಮಂಜು, ಕೋಣಸಾಲೆ ಜಯರಾಂ, ಕಲ್ಲಹಳ್ಳಿ ನಾಗೇಂದ್ರ, ಸುರೇಶ್ ಮೊದಲಾದವರು ಗೋಷ್ಠಿಯಲ್ಲಿದ್ದರು.

ಏಳು ಅಭ್ಯರ್ಥಿಗಳಿಂದ ಒಂಬತ್ತು ನಾಮಪತ್ರ ಸಲ್ಲಿಕೆ

ಕನ್ನಡಪ್ರಭ ವಾರ್ತೆ ಮಂಡ್ಯಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರ ಸಲ್ಲಿಕೆ ಸೋಮವಾರ ಬಿರುಸನ್ನು ಪಡೆದುಕೊಂಡಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಸೇರಿದಂತೆ ಏಳು ಅಭ್ಯರ್ಥಿಗಳು ಒಟ್ಟು ಒಂಬತ್ತು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಮೂರನೇ ದಿನದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರಾಗಿ ಸ್ಪರ್ಧೆ ಬಯಸಿ 7 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಎಚ್.ನಾರಾಯಣ, ಕರುನಾಡು ಪಾರ್ಟಿ ಅಭ್ಯರ್ಥಿಯಾಗಿ ಬೂದಯ್ಯಾ, ಪಕ್ಷೇತರ ಅಭ್ಯರ್ಥಿಯಾಗಿ ಚನ್ನಮಾಯಿಗೌಡ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಎಸ್‌.ಲೋಕೇಶ್, ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕನಂಜಾಚಾರಿ, ಶಂಭುಲಿಂಗೇಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಆರಂಭದಿಂದ ಇಲ್ಲಿಯವರೆಗೆ ಒಟ್ಟು 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿರುತ್ತದೆ.