ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಚಿನ್ನಾಭರಣ ಅಂಗಡಿ ಮಾಲೀಕರು ಮತ್ತು ಚಿನ್ನ-ಬೆಳ್ಳಿ ಆಭರಣ ತಯಾರಕರು ಹಾಗೂ ಮಾರಾಟಗಾರರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಜುವೆಲರಿ ಅಸೋಸಿಯೇಷನ್ ಸದಸ್ಯರ ಸಭೆ ನಡೆಸಲಾಯಿತು.
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜುವೆಲರಿ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರು ಚಿನ್ನಾಭರಣ ಅಂಗಡಿ ಮಾಲೀಕರು, ತಯಾರಕರು ಹಾಗೂ ಮಾರಾಟಗಾರರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗೃಹ ಸಚಿವರ ಗಮನ ಸೆಳೆದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜುವೆಲರಿ ಅಸೋಸಿಯೇಷನ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಚಿನ್ನ-ಬೆಳ್ಳಿ ಅಂಗಡಿ ಮಾಲಿಕರಿಗೆ ಪೊಲೀಸರ ಕಿರುಕುಳ: ಶರವಣಬೆಂಗಳೂರು: ರಾಜ್ಯದಲ್ಲಿ ಚಿನ್ನ-ಬೆಳ್ಳಿ ಆಭರಣ ಮಾಲಿಕರಿಗೆ ಹಾಗೂ ಗಿರವಿ ಅಂಗಡಿಯವರಿಗೆ ಪೊಲೀಸರು ನೀಡುತ್ತಿರುವ ಕಿರುಕುಳ ಕುರಿತು ವಿಧಾನಪರಿಷತ್ತಿನ ಜೆಡಿಎಸ್ ಸದಸ್ಯ ಟಿ.ಎ.ಶರವಣ ಮೇಲ್ಮನೆಯಲ್ಲಿ ಸರ್ಕಾರದ ಗಮನ ಸೆಳೆದರು.
ರಾಜ್ಯದಲ್ಲಿ ಚಿನ್ನ-ಬೆಳ್ಳಿ ಆಭರಣ ಅಂಗಡಿ ಮಾಲೀಕರ ಮೇಲೆ ದಿನೇ ದಿನೇ ಪೊಲೀಸರ ದೌರ್ಜನ್ಯ ಹೆಚ್ಚುತ್ತಿದೆ. ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ನಡೆಸುವ ಮುನ್ನವೇ ಅಂಗಡಿ ಮಾಲೀಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಚಿನ್ನ-ಬೆಳ್ಳಿ ಅಂಗಡಿ ಮಾಲೀಕರಿಗೂ ಸ್ವಾಭಿಮಾನವಿದೆ, ಬದುಕುವ ಹಕ್ಕಿದೆ. ಅದಕ್ಕೆ ಭಂಗ ತರುವ ಹಾಗೂ ಕಿರುಕುಳ ನೀಡುತ್ತಿರುವ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಟಿ. ಎ.ಶರವಣ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೈಮುಗಿದು ಮನವಿ ಮಾಡಿದರು.