ಸಾರಾಂಶ
ಹುನಗುಂದ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿಗೆ ಮಾನವ ಹಕ್ಕು ಆಯೋಗದ ಸದಸ್ಯ ಎಸ್.ಕೆ. ಒಂಟಿಗೋಡಿ ಭಾನುವಾರ ಭೇಟಿ ನೀಡಿ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.

ನಂತರ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಸಿಗುವ ಮೂಲ ಸೌಲಭ್ಯಗಳ ಬಗ್ಗೆ ಹಾಗೂ ಊಟಕ್ಕೆ ತಯಾರಿಸುತ್ತಿರುವ ಅಡುಗೆಯ ಕೊಣೆಗೆ ಭೇಟಿ ನೀಡಿ ಅಡಿಗೆಗೆ ಬಳಸುವ ದಿನಸಿಗಳನ್ನು ಪರಿಶೀಲಿಸಿ ನಂತರ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪಟ್ಟಣದಲ್ಲಿನ ವಸತಿ ನಿಲಯಗಳ ಸ್ವಚ್ಛತೆಯನ್ನು ನೋಡಿ ಉತ್ತಮವಾಗಿವೆ ಇದೇ ರೀತಿ ಮುಂದುವರೆಸಿಕೊಂಡು ಹೋಗುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ವಾರ್ಡನ್‌ರವರಿಗೆ ತಿಳಿಸಿದರು.ತಹಸೀಲ್ದಾರ್ ನಿಂಗಪ್ಪ ಬಿರಾದರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎಸ್.ಎಸ್. ಗಡೇದ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಚ್. ಕಟ್ಟಿಮನಿ ರವರು ಹಾಗೂ ಸಿಬ್ಬಂದಿ ಇದ್ದರು.