ಬೈಕ್‌ ಚಲಾಯಿಸಿ ಸಿಕ್ಕಿಬಿದ್ದ ಅಪ್ರಾಪ್ತ: ಮಾಲೀಕನಿಗೆ ₹25 ಸಾವಿರ ದಂಡ

| Published : Feb 16 2025, 01:45 AM IST

ಬೈಕ್‌ ಚಲಾಯಿಸಿ ಸಿಕ್ಕಿಬಿದ್ದ ಅಪ್ರಾಪ್ತ: ಮಾಲೀಕನಿಗೆ ₹25 ಸಾವಿರ ದಂಡ
Share this Article
  • FB
  • TW
  • Linkdin
  • Email

ಸಾರಾಂಶ

ಸಾರ್ವಜನಿಕ ರಸ್ತೆಯಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ್ದ ವಾಹನ ಮಾಲೀಕನಿಗೆ ಸ್ಥಳೀಯ 2ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹25 ಸಾವಿರ ದಂಡ ವಿಧಿಸಿದೆ.

- ಹೆಲ್ಮೆಟ್ ಧರಿಸದೇ ಬೈಕ್ ಓಡಿಸಿದ್ದ ಬಾಲಕ - - -

ಕನ್ನಡಪ್ರಭ ವಾರ್ತೆ ದಾವಣಗೆರೆ ಸಾರ್ವಜನಿಕ ರಸ್ತೆಯಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ್ದ ವಾಹನ ಮಾಲೀಕನಿಗೆ ಸ್ಥಳೀಯ 2ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹25 ಸಾವಿರ ದಂಡ ವಿಧಿಸಿದೆ.

ನಗರದ ಸರಸ್ವತಿ ಬಡಾವಣೆಯ ವಾಸಿ, ಬೈಕ್ ಮಾಲೀಕ ಪ್ರದೀಪ್ ದಂಡ ಪಾವತಿಸಿದ ವ್ಯಕ್ತಿ. ಅಪ್ರಾಪ್ತನಿಗೆ ಹೀರೋ ಹೊಂಡಾ ಸ್ಪ್ಲೆಂಡರ್‌ ಬೈಕ್ ಚಾಲನೆ ಮಾಡಲು ಕೊಟ್ಟಿದ್ದರು. ಬಾಲಕ ಡೆಂಟಲ್ ಕಾಲೇಜು ರಸ್ತೆಯಲ್ಲಿ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದ. ಈ ವೇಳೆ ಸಂಚಾರ ಪೊಲೀಸರು ಬೈಕ್ ನಿಲ್ಲಿಸಿ, ದಾಖಲೆಗಳ ತಪಾಸಣೆ ಮಾಡಿದಾಗ ಆತ ಅಪ್ರಾಪ್ತ ಎಂಬ ವಿಚಾರ ಗೊತ್ತಾಗಿ, ಬೈಕ್‌ ಜಪ್ತಿ ಮಾಡಿದರು.

ಬೈಕ್ ಮಾಲೀಕನ ವಿರುದ್ಧ ಇಂಡಿಯನ್ ಮೋಟಾರ್ ವೆಹಿಕಲ್ ಆ್ಯಕ್ಟ್ ನಡಿ ಪ್ರಕರಣ ದಾಖಲಿಸಿ, 3ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಲಯವು ಬೈಕ್ ಮಾಲೀಕನಿಗೆ ₹25 ಸಾವಿರ ದಂಡ ವಿಧಿಸಿದೆ.

ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್‌, ಎಎಸ್‌ಪಿಗಳಾದ ವಿಜಯಕುಮಾರ ಎಂ. ಸಂತೋಷ, ಜಿ.ಮಂಜುನಾಥ್‌ ಮಾರ್ಗದರ್ಶನದಲ್ಲಿ ಫೆ.13ರಂದು ಸಂಜೆ ಸಂಚಾರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ ನಲವಾಗಲು ನೇತೃತ್ವದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್‌ಐ ಡಿ.ಎಚ್.ನಿರ್ಮಲ, ಸಿಬ್ಬಂದಿ ರವಿನಾಯ್ಕ ವಿಶೇಷ ಕಾರ್ಯಾಚರಣೆ ನಡೆಸಿದ್ದರು.

- - -

ಕೋಟ್‌ ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನಗಳನ್ನು ಚಾಲನೆ ಮಾಡಲು ಅವಕಾಶ ನೀಡುವ ಪಾಲಕರು, ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸ್ ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ. ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೂ ವಿಶೇಷ ಕಾರ್ಯಾಚರನೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು - ಉಮಾ ಪ್ರಶಾಂತ, ಜಿಲ್ಲಾ ಎಸ್‌ಪಿ

- - - -15ಕೆಡಿವಿಜಿ9:

ದಾವಣಗೆರೆಯಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ಅಪ್ರಾಪ್ತನನ್ನು ಸಂಚಾರ ಪೊಲೀಸ್ ಅಧಿಕಾರಿ, ಸಿಬ್ಬಂದಿ ವಶಕ್ಕೆ ಪಡೆದು ಬೈಕ್ ಜಪ್ತಿ ಮಾಡಿದರು.