ಹೊಸಕೋಟೆ: ರಾಜ್ಯ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು, ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಮತ್ತೊಂದು ಅಧ್ಯಾಯ ಶುರುವಾಗಲಿದೆ. ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಪ್ರಗತಿ ಹೊಂದಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಕನ್ನಡಪ್ರಭಕ್ಕೆ ಪ್ರತಿಕ್ರಿಯೆ ನೀಡಿದರು.
ಮುಖ್ಯ ಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದು ಜನಸೇವೆಯ ಮೇಲಿನ ಬದ್ದತೆ, ಸಂಘಟನೆಯ ಮೇಲಿನ ನಿಷ್ಠೆ ಹಾಗೂ ಅಭಿವೃದ್ಧಿ ದೃಷ್ಟಿಕೋನದೊಂದಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ರಚನೆಯಾಗಿದೆ. ಇವರ ಆಡಳಿತ ಅವಧಿಯಲ್ಲಿ ಜನರ ಆಶೋತ್ತರಗಳು ಈಡೇರಲಿವೆ. ಇವರ ನಾಯಕತ್ವದಲ್ಲಿ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಶಾಸಕ ಶರತ್ ಬಚ್ಚೇಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ಉದ್ಯಮಿ ಬಿ.ವಿ.ಬೈರೇಗೌಡ, ಒಕ್ಕಲಿಗರ ಸಂಘದ ಕರ‍್ಯಾಧ್ಯಕ್ಷ ಬಿ.ವಿ.ರಾಜಶೇಖರ್ ಗೌಡ, ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡ, ಯುವ ಮುಖಂಡ ಬಿ.ಜಿ.ನಾರಾಯಣಗೌಡ ಅವರು ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದಾರೆ.
ಫೋಟೋ: 4 ಹೆಚ್‌ಎಸ್‌ಕೆ 2ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ, ಬೈರೇಗೌಡ, ಬಿ.ವಿ.ರಾಜಶೇಖರ್‌ಗೌಡ ಇತರರು ಅಭಿನಂದಿಸಿದರು.