ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.

ಹಿರೇಕೆರೂರು: ಈ ಬಾರಿ ಈ ಕ್ಷೇತ್ರದಲ್ಲಿ ಹೊಸ ಬಿರುಗಾಳಿ ಬೀಸುತ್ತದೆ. ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಬುರಡಿಕಟ್ಟಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದ ಪಕ್ಷವಾಗಿದೆ. ಈಗಾಗಲೇ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯ ಮಾಡಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ ಮಾಡುವ ಮೂಲಕ ಮಹಿಳೆಯರಿಗೆ ರೈತರಿಗೆ ಮತ್ತಷ್ಟು ಶಕ್ತಿ ತುಂಬಲು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ ಮಡಿವಾಳರ, ಎಸ್.ಬಿ.ತಿಪ್ಪಣ್ಣನವರ, ಮಹೇಶ ಗುಬ್ಬಿ, ಮಹೇಂದ್ರ ಬಡಳ್ಳಿ, ಷಣ್ಮುಖಯ್ಯ ಮಳಿಮಠ, ಮಲ್ಲಿಕಾರ್ಜುನ ಬುರಡೀಕಟ್ಟಿ, ನಿಂಗಪ್ಪ ಚಳಗೇರಿ, ಶಿವರಾಜ ಹರಿಜನ. ಶೇಕಣ್ಣ ಬಿಳಕ್ಕಿ, ಭೀಮಣ್ಣ ದೊಡ್ಡಗೌಡ್ರ, ಮಂಜು ಮರಿಗೌಡ್ರ, ರಾಜು ಅಜಪ್ಪನವರ, ಸಿದ್ದನಗೌಡ, ಲೀಲಾವತಿ ಗೊಣಗೇರ್, ವಸಂತಾ ಮಂಚಿಕೊಪ್ಪ, ಶಶಿಕಲಾ ಹಾದ್ರಿಹಳ್ಳಿ, ನರೇಗೌಡ್ರ, ಕೊಂಟೇಶ್ ಅಂಗಡಿ, ಪ್ರಕಾಶ ಉಪ್ಪಾರ, ಸುರೇಶ ಮಡಿವಾಳರ್, ಶಂಕರಗೌಡ ನರೇಗೌಡ್ರ, ಜೋತಿ ಜಾಧ‍ವ ಸೇರಿದಂತೆ ಬಾಳಂಬೀಡ ಹೊಲಬಿಕೊಂಡ ಹಾಗೂ ಕಾಲ್ವಿಹಳ್ಳಿ, ಬುರಡಿಕಟ್ಟಿ ಗ್ರಾಮಗಳ ಪಕ್ಷದ ಮುಖಂಡರು, ಕಾರ್ಯಕರ್ತರಿದ್ದರು.