ಹಾವೇರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್‌ಪಿ ಸಮೀವುಲ್ಲಾ ಕೆ. ದಂಪತಿ ಪೊಲೀಸ್‌ ಠಾಣೆಗೆ ಆಗಮಿಸಿ ಸತ್ಯನಾರಾಯಣ ಪೂಜೆ ನೆರವೇರಿಸುವ ಮೂಲಕ ಇತರರಿಗೆ ಮಾದರಿಯಾದರು.

ಹಾವೇರಿ: ಇಲ್ಲಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್‌ಪಿ ಸಮೀವುಲ್ಲಾ ಕೆ. ದಂಪತಿ ಪೊಲೀಸ್‌ ಠಾಣೆಗೆ ಆಗಮಿಸಿ ಸತ್ಯನಾರಾಯಣ ಪೂಜೆ ನೆರವೇರಿಸುವ ಮೂಲಕ ಇತರರಿಗೆ ಮಾದರಿಯಾದರು.

ಗಣೇಶೋತ್ಸವ ನಿಮಿತ್ತ ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ಎದುರು ವಿಶೇಷವಾಗಿ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿತ್ತು. ಸಮೀವುಲ್ಲಾ ದಂಪತಿ ಶ್ರದ್ಧಾಭಕ್ತಿಯಿಂದ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡರು. ನಂತರ ಕುಟುಂಬದ ಸದಸ್ಯರೂ ಪ್ರಸಾದ ಸ್ವೀಕರಿಸಿದರು.

ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಾರ್ಯಸ್ಥಳದಲ್ಲಿ ಕುಟುಂಬ ಸಮೇತ ಸ್ಥಳೀಯ ಹಿಂದೂ ಸಂಪ್ರದಾಯದಂತೆ ಪೂಜೆ ನೆರವೇರಿಸಿರುವುದು ಗಮನ ಸೆಳೆಯಿತು. ಈ ಮೂಲಕ ಎಲ್ಲ ಧರ್ಮಗಳ ಆಚರಣೆಗಳನ್ನು ಗೌರವಿಸುವುದು, ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಬದುಕುವುದು ಎಂಬ ಭಾವೈಕ್ಯತೆಯ ಸಂದೇಶ ಸಾರಿದರು.