ಭಾಷಾ ನೈಪುಣ್ಯತೆ ಬೆಳೆಸಿಕೊಂಡವನೆ ಪರಿಪೂರ್ಣ ವ್ಯಕ್ತಿ: ಗೋಪಾಲಕೃಷ್ಣ ಬೇಳೂರು

| Published : Aug 19 2024, 12:46 AM IST

ಭಾಷಾ ನೈಪುಣ್ಯತೆ ಬೆಳೆಸಿಕೊಂಡವನೆ ಪರಿಪೂರ್ಣ ವ್ಯಕ್ತಿ: ಗೋಪಾಲಕೃಷ್ಣ ಬೇಳೂರು
Share this Article
  • FB
  • TW
  • Linkdin
  • Email

ಸಾರಾಂಶ

ರಿಪ್ಪನ್‍ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೀಡ್‌ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ನೋಟ್‌ಬುಕ್ ವಿತರಣೆ ಮಾಡಿದರು.

ಕನ್ನಡಪ್ರಭ ವಾರ್ತೆ ರಿಪ್ಪನ್‍ಪೇಟೆ

ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಭಾಷೆಯ ನೈಪುಣ್ಯತೆ ಬೆಳೆಸಿಕೊಂಡಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ರಿಪ್ಪನ್‍ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಮಾಡಿ ಮಾತನಾಡಿ, ಸರ್ಕಾರಿ ಶಾಲೆ ಕಾಲೇಜ್‌ಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗಾಗಿ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿ ನೀಡ್‍ಬೇಸ್ ಸಂಸ್ಥೆಯವರು ತೀರ್ಥಹಳ್ಳಿ ತಾಲೂಕು ಸೇರಿದಂತೆ ರಾಜ್ಯದ ಹಲವು ಕಡೆಯಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದೆ. ಅದನ್ನು ವಿಸ್ತರಿಸಿ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು ನೀಡುವ ಮೂಲಕ ತಮ್ಮ ವೈಯಕ್ತಿಕ ಅರ್ಥಿಕ ನೆರವು ಕಲ್ಪಿಸುವುದಾಗಿ ತಿಳಿಸಿದ ಶಾಸಕರು, ಮುಂದಿನ ವರ್ಷದಲ್ಲಿ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುವಂತೆ ಆಯೋಜಕರಿಗೂ ಕಿವಿಮಾತು ಹೇಳಿದರು.

ಎಸ್.ಡಿ.ಎಂ.ಸಿ.ಆಧ್ಯಕ್ಷ ಪ್ರಶಾಂತ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತ್ ಆಧ್ಯಕ್ಷೆ ಧನಲಕ್ಷ್ಮಿ, ನೀಡ್ ಬೇಸ್ ಸಂಸ್ಥೆಯ ಅದರ್ಶ ಹುಂಚದಕಟ್ಟೆ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ತಾಲ್ಲೂಕ್ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಮೌಳಿಗೌಡರು, ಹೋಬಳಿ ಘಟಕದ ಅಧ್ಯಕ್ಷ ಗಣಪತಿಗವಟೂರು, ಡಿ.ಈ.ಮಧುಸೂಧನ, ಎನ್.ಚಂದ್ರೇಶ್, ಆಶೀಫ್‍ ಬಾಷಾ, ಪ್ರಕಾಶ ಪಾಲೇಕರ್, ರವೀಂದ್ರ ಕೆರೆಹಳ್ಳಿ, ಶ್ರೀಧರ, ದೈಹಿಕ ಶಿಕ್ಷಣ ಸಂಯೋಜಕ ಬಾಲಚಂದ್ರ, ಸಂಪನ್ಮೂಲ ವ್ಯಕ್ತಿ ರಂಗನಾಥ, ಉಪ ಪ್ರಾಚಾರ್ಯ ಕೆಸವಿನಮನೆ ರತ್ನಾಕರ್, ರಾಘವೇಂದ್ರ, ಇನ್ನಿತರರು ಹಾಜರಿದ್ದರು. ಉಪ ಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ಸ್ವಾಗತಿಸಿದರು. ಶಿಕ್ಷಕ ಚಂದ್ರಪ್ಪ ನಿರೂಪಿಸಿದರು.----‘ವಿದ್ಯಾರ್ಥಿಗಳು ವ್ಯಾಸಂಗದಿಂದ ಹಿಂದುಳಿಯದಂತೆ ನಿಗಾ ಇರಿಸಿ’ಈ ವರ್ಷದ ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮ ಪ್ರಗತಿ ಹೊಂದಿದ್ದು, ಬರುವ ಶೈಕ್ಷಣಿಕ ವರ್ಷದಲ್ಲಿ ಶೇಕಡ 100 ರಷ್ಟು ಫಲಿತಾಂಶ ಗಳಿಸುವಂತೆ ವಿದ್ಯಾರ್ಥಿ ಗಳಿಗೆ ಮತ್ತು ಶಿಕ್ಷಕ ವೃಂದದವರಿಗೆ ಕರೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಎಲ್ಲಿಯೂ ವ್ಯಾಸಂಗದಿಂದ ವಿದ್ಯಾರ್ಥಿಗಳು ಹಿಂದುಳಿಯದಂತೆ ಮಾಡುವ ಜವಾಬ್ದಾರಿ ಶಿಕ್ಷಕರದಾಗಬೇಕು ಎಂದು ಕಿವಿಮಾತು ಹೇಳಿದರು.