ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ವಶ

| Published : Nov 27 2024, 01:00 AM IST

ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ವಶ
Share this Article
  • FB
  • TW
  • Linkdin
  • Email

ಸಾರಾಂಶ

ಒಡೆಯರಪಾಳ್ಯದ ಬಳಿ ಒಣ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

ಹನೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕತ್ತೆಕಾಲು ಪೋಡುಗ್ರಾಮದ ಬಸಪ್ಪ(36)ಎಂಬಾತನೆ ಬಂಧಿತ. ಈತ ತಾಲೂಕಿನ ಒಡೆಯರಪಾಳ್ಯದ ಬಳಿ ಒಣ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಅರಿತ ಹನೂರು ಪೊಲೀಸ್ ಇನ್ಸ್‌ಪೆಕ್ಟರ್ ಶಶಿಕುಮಾರ್ ‌ನೇತೃತ್ವದ ತಂಡ ದಾಳಿ ನಡೆಸಿದಾಗ ಒಣ ಗಾಂಜಾ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೆ ಸುಮಾರು 360 ಗ್ರಾಂ ಗಾಂಜಾ ಸೇರಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆ ವೇಳೆ ಸಿಬ್ಬಂದಿ ಸಬ್ ಇನ್ಸ್‌ಪೆಕ್ಟರ್ ಮಂಜುನಾಥಪ್ರಸಾದ್ ಸಿಬ್ಬಂದಿ ನಂಜುಂಡ, ರಾಘವೇಂದ್ರ ಸೇರಿದಂತೆ ಹಲವರು ಇದ್ದರು.