ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯವಿದೆ: ಶಾಸಕ ಜಿ.ಎಚ್.ಶ್ರೀನಿವಾಸ್

| Published : Dec 09 2024, 12:47 AM IST

ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯವಿದೆ: ಶಾಸಕ ಜಿ.ಎಚ್.ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಮಕ್ಕಳ ಪ್ರತಿಭೆ ಅನಾವಣರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅಗತ್ಯವಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ತಾಲೂಕುಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ-ಕಲೋತ್ಸವ

ಕನ್ನಡಪ್ರಭ ವಾರ್ತೆ, ತರೀಕೆರೆ

ಮಕ್ಕಳ ಪ್ರತಿಭೆ ಅನಾವಣರಣಕ್ಕೆ ಪ್ರತಿಭಾ ಕಾರಂಜಿಯಂತಹ ವೇದಿಕೆ ಅಗತ್ಯವಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ತಾಲೂಕು ಅಡಳಿತ, ಶಿಕ್ಷಣ ಇಲಾಖೆಯಿಂದ ಪಟ್ಟಣದ ತುದಿಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ತರೀಕೆರೆ ಮತ್ತು ಅಜ್ಜಂಪುರ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಹಳೆಯ ವಿದ್ಯಾರ್ಥಿಯಾಗಿರುವ ಶಾಲೆಯಲ್ಲಿಯೇ ಕಾರ್ಯಕ್ರಮ ನಡೆಸುತ್ತಿರುವುದು ಸಂತಸ ತಂದಿದೆ. ಶಾಲೆ 2025 ರ ಜೂನ್ ಗೆ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು. ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಮಾತನಾಡಿದರು. ಪುರಸಭೆ ಉಪಾಧ್ಯಕ್ಷೆ ಗಿರಿಜ ಪ್ರಕಾಶ್ ವರ್ಮ, ಸದಸ್ಯರಾದ ಟಿ.ಜಿ.ಲೋಕೇಶ್, .ಯಶೋದಮ್ಮ, ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಧರಣೇಶ್, ಕಾರ್ಯದರ್ಶಿ ಆನಂದ ಕುಮಾರ್, ನೌಕರರ ಸಂಘದ ಅಧ್ಯಕ್ಷ ಅನಂತಪ್ಪ, ನಿರ್ದೇಶಕರು ಎಂ.ಬಿ.ರಾಮಚಂದ್ರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

8ಕೆಟಿಆರ್.ಕೆ.4ಃ

ತರೀಕರೆಯಲ್ಲಿ ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ನಡೆದ ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಉದ್ಘಾಟನೆಯನ್ನುಶಾಸಕ ಜಿ.ಎಚ್. ಶ್ರೀನಿವಾಸ್ ನೆರವೇರಿಸಿ ಮಾತನಾಡಿದರು.