ಸಾರಾಂಶ
ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಂಬುಕೇಶ್ವರಗಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮಖಂಡಿ: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಂಬುಕೇಶ್ವರಗಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಲ್ಲಿ ಮಳೆಯಿಂದಾಗಿ ಜಲಾವೃತವಾಗುವ ಪ್ರದೇಶಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಸಂಗ್ರಹವಾಗದಂತೆ ಕ್ರಮ ಜರುಗಿಸಬೇಕೆಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರದ ಗಮನಕ್ಕೆ ತಂದು ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು. ನಗರ ಸಭೆಯ ಅಧ್ಯಕ್ಷ ಪರಮಾನಂದ ಗೌರೋಜಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ರೋಹಿತ ಸೂರ್ಯವಂಶಿ, ಕಂದಾಯ ನಿರೀಕ್ಷಕ ಪ್ರಕಾಶ ಪವಾರ ಇದ್ದರು.