ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾದ ಘಾಟಿ ಸುಬ್ರಹ್ಮಣ್ಯದಲ್ಲಿ ಮಂಗಳವಾರ 1,001 ಈಡುಗಾಯಿ ಒಡೆದು ಡಿಕೆಶಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು.
ದೊಡ್ಡಬಳ್ಳಾಪುರ:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿ ತಾಲೂಕಿನ ಸುಪ್ರಸಿದ್ದ ಯಾತ್ರಾಸ್ಥಳವಾದ ಘಾಟಿ ಸುಬ್ರಹ್ಮಣ್ಯದಲ್ಲಿ ಮಂಗಳವಾರ 1,001 ಈಡುಗಾಯಿ ಒಡೆದು ಡಿಕೆಶಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶರತ್ ಪಟೇಲ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ಯಶವಂತ್ , ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೇರಳಘಟ್ಟ ರಾಕೇಶ್ ಗೌಡ , ತಾಲೂಕು ಉಪಾಧ್ಯಕ್ಷ ಶ್ರವಣೂರು ರಾಜೇಶ್ , ತೂಬಗೆರೆ ಬ್ಲಾಕ್ ಅಧ್ಯಕ್ಷ ನರಸಿಂಹಮೂರ್ತಿ, ಯುವ ಕಾಂಗ್ರೆಸ್ ಮುಖಂಡ ವಿನಯ್ ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.ಫೋಟೋ-25ಕೆಡಿಬಿಪಿ3- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಘಾಟಿ ಸುಬ್ರಹ್ಮಣ್ಯದಲ್ಲಿ 1001 ಈಡುಗಾಯಿ ಒಡೆದರು.