ಸಾರಾಂಶ
ಚಳ್ಳಕೆರೆ ನಗರದ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಸ್ನೇಹ ಪೂರ್ವಕ ಕ್ರಿಕೆಟ್ ಪಂದ್ಯಾವಳಿಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಉದ್ಘಾಟಿಸಿದರು.
ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ನ್ಯಾ.ವಿಜಯ್ ಹೇಳಿಕೆ ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಏಕೈಕ ಇಲಾಖೆ ಅಂದರೆ ಅದು ಪೊಲೀಸ್ ಇಲಾಖೆ, ಯಾವುದೇ ಒತ್ತಡವಿದ್ದರೂ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಿ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿವೆ. ಕೆಲಸ ಕಾರ್ಯಗಳ ನಡುವೆಯೂ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ತಿಳಿಸಿದರು.ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಕೀಲರ ಸಂಘ, ಪೊಲೀಸ್, ಕಂದಾಯ, ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಕ್ರಕೆಟ್ ಪಂದ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.ಪೊಲೀಸ್ ಮತ್ತು ವಕೀಲರು ಪ್ರತಿನಿತ್ಯವೂ ಇಲಾಖಾ ಕಾರ್ಯಗಳ ಹಿನ್ನೆಲೆಯಲ್ಲಿ ಪರಸ್ವರ ಭೇಟಿ ಮಾಡಿ ಚರ್ಚಿಸುತ್ತಾರೆ. ಜೊತೆಯಲ್ಲಿ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳೂ ಸಹ ಇಂತಹ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಎಲ್ಲರ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಹಿರಿಯ ನ್ಯಾಯಾಧೀಶ ಶಮೀರ್‌ಪಿ.ನಂದ್ಯಾಲ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಎಚ್.ಆರ್.ಹೇಮಾ, ತಹಸೀಲ್ದಾರ್ ರೇಹಾನ್ ಪಾಷ, ಡಿವೈಎಸ್‌ಪಿ ಟಿ.ಬಿ.ರಾಜಣ್ಣ, ವೃತ್ತ ನಿರೀಕ್ಷಕ ಹನುಮಂತಪ್ಪ ಸಿರೇಹಳ್ಳಿ, ಆರ್.ಎಫ್.ದೇಸಾಯಿ, ವಕೀಲರ ಸಂಘದ ಅಧ್ಯಕ್ಷ ಕೆ.ಎಂ.ನಾಗರಾಜು, ಉಪಾಧ್ಯಕ್ಷ ಬಿ.ಪಾಲಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಸಿದ್ದರಾಜು, ಖಜಾಂಚಿ ರುದ್ರಯ್ಯ, ಪಿಎಸ್‌ಐ ಮಾರುತಿ, ಸಾಮಾಜಿಕ ಅರಣ್ಯ ವಲಯ ಅಧಿಕಾರಿ ನಿತಿನ್, ಸಂಶೋಧನಾ ವಲಯ ಅರಣ್ಯ ಮುಸ್ತಾನ್, ಎಇಇ ವಿನಯ್, ಆರೋಗ್ಯ ನಿರೀಕ್ಷಕ ಗಣೇಶ್, ಪತ್ರಕರ್ತ ವಿ.ವೀರೇಶ್, ನಾಗರಾಜು, ತಿಮ್ಮಣ್ಣ ಮುಂತಾದವರು ಉಪಸ್ಥಿತರಿದ್ದರು.