ಸಾರಾಂಶ
ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿ 14 ಜನ ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಜಗಳೂರು ಪಟ್ಟಣದ ಕೆರೆ ಏರಿಯ ಮೇಲೆ ಸಂಭವಿಸಿದೆ.
ದಾವಣಗೆರೆ: ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿ 14 ಜನ ಗಾಯಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಜಗಳೂರು ಪಟ್ಟಣದ ಕೆರೆ ಏರಿಯ ಮೇಲೆ ಸಂಭವಿಸಿದೆ.
ಹೂವಿನಹಡಗಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ. ಸಣ್ಣಪುಟ್ಟ ಏಟು ಬಿದ್ದವರು ಜಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಂತಮ್ಮ ಮನೆಗಳಿಗೆ ತೆರಳಿದ್ದಾರೆ.ಗಂಭೀರ ಗಾಯಗೊಂಡ ಇಬ್ಬರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- - - (ಸಾಂದರ್ಭಿಕ ಚಿತ್ರ)